ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಮಾಲ್ ಗಳಿಗೆ ರಾಜ್ಯದ ಉಡುಪುಗಳನ್ನು ಧರಿಸಿ ಪ್ರವೇಶಿಸಲು ನಿರ್ಬಂಧ ಹೇರದಂತೆ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಬಳಿಕ ಸ್ವಯಂ ಹೇಳಿಕೆ ನೀಡಿದ ಡಿಸಿಎಂ, ಪಂಚೆ ಧರಿಸಿ ಬಂದಿದ್ದ ರಾಣೆಬೆನ್ನೂರಿನ ರೈತರೊಬ್ಬರಿಗೆ ಬೆಂಗಳೂರಿನ ಜಿ.ಟಿ. ಮಾಲ್ ಗೆ ಪ್ರವೇಶ ನೀಡದ ಘಟನೆ ಸದನದಲ್ಲಿ ಚರ್ಚೆಯಾಗಿದೆ. ಇಂತಹ ಘಟನೆ ಮರುಕಳಿಸದಂತೆ ಸರ್ಕಾರದಿಂದಲೇ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ಪಂಚೆ ಧರಿಸಿ ಬಂದವರಿಗೆ ಯಾವುದೇ ಮಾಲ್ ಗಳಲ್ಲಿ ಪ್ರವೇಶ ನಿರಾಕರಿಸಬಾರದು. ರೈತರಿಗೆ ಪ್ರವೇಶ ನೀಡದ ಮಾಲ್ ಗೆ ನೋಟಿಸ್ ನೀಡಲಾಗಿತ್ತು. ಪಂಚೆ ನಮ್ಮ ಸಂಸ್ಕೃತಿಯಾಗಿದ್ದು, ಇದಕ್ಕೆ ಪೂರಕವಾಗಿ ನಿಯಮ ತರಲಾಗುತ್ತದೆ. ಇಡೀ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಇಂತಹ ಘಟನೆಗಳು ನಡೆಯದಂತೆ ನಿಯಮಾವಳಿ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.