alex Certify ಕ್ಷೇತ್ರದ ಜನರಿಗಾಗಿ ಡಿ.ಕೆ. ಶಿವಕುಮಾರ್ ಕಾಲಿಗೆ ಬೀಳುತ್ತೇನೆ: ಮುನಿರತ್ನ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಷೇತ್ರದ ಜನರಿಗಾಗಿ ಡಿ.ಕೆ. ಶಿವಕುಮಾರ್ ಕಾಲಿಗೆ ಬೀಳುತ್ತೇನೆ: ಮುನಿರತ್ನ ಹೇಳಿಕೆ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಕೈಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಮುನಿರತ್ನ, ನನ್ನ ಕ್ಷೇತ್ರದ ಜನರಿಗಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಕಾಲಿಗೆ ಬೀಳಲು ಸಿದ್ಧವಾಗಿದ್ದೇನೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್ ಕಾಲು ಹಿಡಿಯಲು ಸಿದ್ದನಿದ್ದೇನೆ. ಪ್ರತಿಭಟನೆ ಮುಗಿದ ಕೂಡಲೇ ಡಿಸಿಎಂ ಡಿಕೆ ಇರುವ ಕಡೆ ಹೋಗುತ್ತೇನೆ. ಅವರು ಎಲ್ಲಿರುತ್ತಾರೋ ಅಲ್ಲಿಗೆ ಹೋಗಿ ಕಾಲು ಹಿಡಿದುಕೊಂಡು ಬಿಡುತ್ತೇನೆ. ನಾನು ಮುಖ್ಯಮಂತ್ರಿ ಹತ್ತಿರ ಹೋಗಲ್ಲ. ಡಿಸಿಎಂ ಹತ್ತಿರ ಹೋಗುತ್ತೇನೆ. ಡಿಸಿಎಂ ಅವರೇ ಬೆಂಗಳೂರಿನ ಸಿಎಂ, ಹೀಗಾಗಿ ಅವರ ಬಳಿಗೆ ಹೋಗುತ್ತೇನೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಕಾಲನ್ನೇ ನಾನು ಹಿಡಿಯುತ್ತೇನೆ ಎಂದು ಹೇಳಿದ್ದಾರೆ.

ಕಾಶ್ಮೀರ ಸಮಸ್ಯೆ ಬಗೆಹರಿಯುತ್ತದೆ. ನನ್ನ ಕ್ಷೇತ್ರದ ಸಮಸ್ಯೆ ಬಗೆಹರಿಯಲ್ಲ. ಕೊನೆ ಉಸಿರು ಇರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ. ಎಲ್ಲಿಗೂ ಹೋಗುವುದಿಲ್ಲ ಎಂದು ಮುನಿರತ್ನ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...