
ಕೊಪ್ಪಳ: ಸಂವಿಧಾನ ಬದಲಿಸಿಯಾದರೂ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿ ನೀಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ಖಂಡಿಸಿ ಏಪ್ರಿಲ್ 1, 2, 3ರಂದು ಹುಬ್ಬಳ್ಳಿ, ಕೊಪ್ಪಳ, ತುಮಕೂರು, ಮೈಸೂರಿನಲ್ಲಿ ಬಿಜೆಪಿಯಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎಸ್. ರವಿಕುಮಾರ್ ಹೇಳಿದ್ದಾರೆ.
ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿ ನೀಡಿದ್ದನ್ನು ವಿರೋಧಿಸಿ ಸದನದ ಒಳಗೆ ಹೋರಾಟ ಮಾಡಿದ್ದೇವೆ. ಈಗ ಡಿಸಿಎಂ ಡಿ.ಕೆ. ಶಿವಕುಮಾರ್ ಇದಕ್ಕಾಗಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದು ಅವರ ಮನಸ್ಸಿನ ಮಾತಾಗಿದೆ. ಸಂವಿಧಾನದಲ್ಲಿ ಧರ್ಮಧಾರಿತ ಮೀಸಲಾತಿ ನೀಡಲು ಅವಕಾಶವಿಲ್ಲ. ಇದಕ್ಕಾಗಿಯೇ ಸಂವಿಧಾನ ಬದಲಾಯಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಆದರೆ, ಅಲ್ಪಸಂಖ್ಯಾತರಿಗೆ ಧರ್ಮ ಆಧಾರಿತ ಮೀಸಲಾತಿ ನೀಡಲು ನಾವು ಬಿಡುವುದಿಲ್ಲ. ತೀವ್ರ ಹೋರಾಟ ನಡೆಸುತ್ತೇವೆ ಎಂದು ರವಿಕುಮಾರ್ ಹೇಳಿದ್ದಾರೆ.