
ಬೆಂಗಳೂರು: ಅಮೆರಿಕದಿಂದ ಡಿಸಿಎಂ ಡಿ.ಕೆ. ಶಿವಕುಮಾರ್ ವಾಪಸ್ ಆಗಿದ್ದಾರೆ. ಒಂದು ವಾರ ಕುಟುಂಬದೊಂದಿಗೆ ಅಮೆರಿಕ ಪ್ರವಾಸಕ್ಕೆ ತೆರಳಿದ್ದ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ.
ಇಂದು ಸಂಜೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು ಅವರು ಕಲಬುರಗಿಗೆ ಪ್ರಯಾಣ ಬೆಳೆಸಲಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ., ಶಾಸಕ ಮುನಿರತ್ನ ಬಂಧನದ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಹಿತಿ ತಿಳಿದುಕೊಂಡು ಅದರ ಬಗ್ಗೆ ಮಾತನಾಡುತ್ತೇನೆ. ಈ ಬಗ್ಗೆ ಬಿಜೆಪಿ ನಾಯಕರೇ ಪ್ರತಿಕ್ರಿಯೆ ನೀಡಬೇಕು. ಆರ್. ಅಶೋಕ್, ಬಿ.ವೈ. ವಿಜಯೇಂದ್ರ ಅವರು ಮಾತನಾಡಬೇಕು. ಆ ಸಮುದಾಯದ ಶ್ರೀಗಳು, ನಾಯಕರು ಮಾತನಾಡಬೇಕು ಎಂದು ಹೇಳಿದ್ದಾರೆ.