alex Certify BIG NEWS : ‘ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ’ : ಶಿವ ಯೋಗೇಶ್ವರ ಸ್ವಾಮೀಜಿ ಭವಿಷ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ’ : ಶಿವ ಯೋಗೇಶ್ವರ ಸ್ವಾಮೀಜಿ ಭವಿಷ್ಯ

ಮಂಡ್ಯ : ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ ಎಂದು ಶ್ರೀ ಕರಿವೃಷಭ ದೇಶೀಕೇಂದ್ರ ಶಿವ ಯೋಗೇಶ್ವರ ಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸ್ವಾಮೀಜಿ ಡಿ.ಕೆ ಶಿವಕುಮಾರ್ ಖಂಡಿತ ಸಿಎಂ ಆಗ್ತಾರೆ . ಅವರಿಗೆ ಸಿಎಂ ಆಗುವ ಅವಕಾಶವಿದೆ. ಅವರು ಸಿಎಂ ಆಗಲಿ ಎಂಬುದು ನಮ್ಮ ಸಂಕಲ್ಪವಾಗಿದೆ ಎಂದು ಹೇಳಿದ್ದಾರೆ .ಈ ಮೂಲಕ ಮತ್ತೆ ಸಿಎಂ ಚರ್ಚೆ ಮುನ್ನೆಲೆಗೆ ಬಂದಿದೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರೆ ಈ ಹಿಂದೆ ಹಲವು ಸ್ವಾಮೀಜಿಗಳು ಭವಿಷ್ಯ ನುಡಿದಿದ್ದರು. ಹಲಗಾದ ಜೈನ ಬಸದಿಯ ಪ. ಪೂ ಬಾಲಾಚಾರ್ಯ ಶ್ರೀ ಸಿದ್ದಸೇನ ಮುನಿ ಮಹಾರಾಜರು ಕೂಡ ಇತ್ತೀಚೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಪಟ್ಟು ಹಿಡಿದಿದ್ದು, ಸೋನಿಯಾ ಗಾಂಧಿ ಸಭೆ ನಡೆಸಿದ್ದರು. ರಾತ್ರೋರಾತ್ರಿ ಸಂಧಾನದ ಬಳಿಕ ಸಿದ್ದರಾಮಯ್ಯ ಸಿಎಂ ಹಾಗೂ ಡಿ ಕೆ ಶಿವಕುಮಾರ್ ಡಿಸಿಎಂ ಗೆ ಆಗಲು ಒಪ್ಪಿಕೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...