alex Certify ‘ಚಂದ್ರಯಾನ-3’ ಯಶಸ್ವಿಗೆ ಶುಭ ಹಾರೈಸಿದ ಡಿಸಿಎಂ ಡಿಕೆ ಶಿವಕುಮಾರ್ |Chandrayana-3 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಚಂದ್ರಯಾನ-3’ ಯಶಸ್ವಿಗೆ ಶುಭ ಹಾರೈಸಿದ ಡಿಸಿಎಂ ಡಿಕೆ ಶಿವಕುಮಾರ್ |Chandrayana-3

ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾಗಲೆಂದು ಕೋಟ್ಯಾಂತರ ಭಾರತೀಯರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಚಂದ್ರಯಾನ-3 ಯಶಸ್ವಿಯಾಗಲೆಂದು ಶುಭ ಹಾರೈಸಿದ್ದಾರೆ.

ಭಾರತಕ್ಕೆ ಇದು ಸಂತಸದ ದಿನ. ಇಂದು ಚಂದ್ರಯಾನ-3 ಯಶಸ್ವಿಯಾಗುತ್ತದೆ. ನಾನು ಸಮಯ ಮಾಡಿಕೊಂಡು ವೀಕ್ಷಣೆ ಮಾಡುತ್ತೇನೆ. ಚಂದ್ರಯಾನ-3 ಯಶಸ್ವಿಗೆ ಕೆಲಸ ಮಾಡಿದ ವಿಜ್ಞಾನಿಗಳಿಗೆ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ವಿಜ್ಞಾನಿಗಳ ಕೆಲಸಕ್ಕೆ ಶುಭ ಕೋರುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಗೆ ಕ್ಷಣಗಣನೆಯಾಗಿದ್ದು, ರಾಜ್ಯದೆಲ್ಲೆಡೆ ಹೋಮ ಹವನ, ಪ್ರಾರ್ಥನೆ ಜೋರಾಗಿದೆ. ಚಂದ್ರಯಾನ-3 ಯಶಸ್ವಿಯಾಗಲೆಂದು ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ -3’ ಲ್ಯಾಂಡಿಂಗ್ ಲೈವ್ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಇಂದು ಸಂಜೆ 5 ಗಂಟೆ 10 ನಿಮಿಷಕ್ಕೆ ಚಂದ್ರಯಾನ-3 ಲೈವ್ ಆರಂಭವಾಗಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...