ಬೆಂಗಳೂರು : ಲೋಕಸಭೆ ಚುನಾವಣೆ ಹೊತ್ತಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಿಡ್ ನೈಟ್ ಆಪರೇಷನ್ ಮಾಡಿದ್ದು, ಬರೋಬ್ಬರಿ 400 ಕ್ಕೂ ಹೆಚ್ಚು ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ತಮ್ಮನನ್ನು ಗೆಲ್ಲಿಸಲು ಡಿಸಿಎಂ ಡಿಕೆಶಿ ಬೆಂಗಳೂರು ಗ್ರಾಮಾಂತರದಲ್ಲಿ ಮಿಡ್ ನೈಟ್ ಆಪರೇಷನ್ ಮಾಡಿದ್ದು,
ಚನ್ನಪಟ್ಟಣದ ಹಲವು ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ನ ತತ್ವಾದರ್ಶಗಳಿಂದ ಪ್ರೇರಿತರಾದ ಜೆಡಿಎಸ್ ಪಕ್ಷದ ಕಾರ್ಯಕರ್ತರು, ನಾಯಕರು ಸೇರಿದಂತೆ 400ಕ್ಕೂ ಹೆಚ್ಚು ಜನರು ಪಕ್ಷ ಸೇರ್ಪಡೆಗೊಂಡರು. ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಶುಭ ಹಾರೈಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ತಮ್ಮನನ್ನು ಗೆಲ್ಲಿಸಲು ಪಣ ತೊಟ್ಟಿರುವ ಡಿಸಿಎಂ ಡಿಕೆಶಿ ತಡರಾತ್ರಿ ಮಿಡ್ ನೈಟ್ ಆಪರೇಷನ್ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ ಆಪ್ತರಿಗೆ ಗಾಳ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶ್ರೀರಾಮ್ ಸಮ್ಮಿಟ್ ಅಪಾರ್ಟ್ಮೆಂಟ್ʼನಲ್ಲಿ ಮತದಾರರನ್ನು ಭೇಟಿ ಮಾಡದ ಡಿಕೆಶಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಡಿಕೆ ಸುರೇಶ್ ಅವರಿಗೆ ಮತ ನೀಡಿ ಎಂದು ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಯೋಜನೆಗಳನ್ನು ನಾವು ಯಶಸ್ವಿಯಾಗಿ ಅನುಷ್ಠಾನ ಗೊಳಿಸಿದ್ದೇವೆ. ಕರ್ನಾಟಕದ ಜನತೆ ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಡಿಕೆ ಸುರೇಶ್ ಅವರು ಜನಸಾಮಾನ್ಯರಿಗೆ, ರೈತರಿಗೆ, ಬಡವರಿಗೆ ತಮ್ಮದೇ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವರ ಅಪಾರ ದೂರ ದೃಷ್ಟಿಯ ಯೋಜನೆಗಳಿಗಾಗಿ ಮತ್ತೊಮ್ಮೆ ಅವರನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ದೇಶದ ಪ್ರಗತಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.