ಬೆಂಗಳೂರು : ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಇಂದಿನಿಂದ ಆರಂಭವಾದ ʼನಮ್ಮ ರಸ್ತೆʼ- 3 ದಿನಗಳ ಪ್ರದರ್ಶನ ಹಾಗೂ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದರು.
ಈ ಕಾರ್ಯಕ್ರಮವನ್ನು ಒಳ್ಳೆಯ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಉಪಯೋಗಿಸುವಂತಹ ರಸ್ತೆ, ಪಾದಚಾರಿ ಮಾರ್ಗಗಳನ್ನು ನಾಗರಿಕರ ಸುರಕ್ಷತೆ ದೃಷ್ಟಿಯಲ್ಲಿಟ್ಟುಕೊಂಡು ವಿನ್ಯಾಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರದಲ್ಲಿ ಬಂದಂತಹ ಉತ್ತಮ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಂಡು ಅಭಿವೃದ್ಧಿಗೊಳಿಸಲಾಗುವುದು.
ಈ ವಿಶಿಷ್ಟ ಅಭಿಯಾನವು ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡಲು ಸಾಕಷ್ಟು ಪೂರಕವಾಗಿದೆ. ಇದರಿಂದ ಬೆಂಗಳೂರಿನಲ್ಲಿ ಸಕ್ರಿಯ ಸಾರಿಗೆಯನ್ನು ಉತ್ತೇಜಿಸಲು, ಆರೋಗ್ಯಕರ ಜೀವನಶೈಲಿ ನಡೆಸಲು, ಪಾದಚಾರಿ-ಸ್ನೇಹಿ ಬೀದಿಗಳು, ಸೈಕ್ಲಿಂಗ್ಗಾಗಿಯೇ ಮೀಸಲಾದ ಪ್ರತ್ಯೇಕ ಲೇನ್ಗಳು ಮತ್ತು ಹಸಿರುಮಯವಾದ ಸ್ಥಳಗಳನ್ನು ಸೃಷ್ಟಿಸಲು ಸಹಕಾರಿಯಾಗಲಿದೆ ಎಂದರು.
ನಗರದಲ್ಲಿ ಮೆಟ್ರೋ ಜಾಲ, ಉಪನಗರ ರೈಲು ಸೌಲಭ್ಯಗಳು ಮತ್ತು ಬಸ್ ಸೇವೆಗಳ ತ್ವರಿತ ವಿಸ್ತರಣೆಯೊಂದಿಗೆ ಬೆಂಗಳೂರು ನಿರ್ಣಾಯಕ ಹಂತದಲ್ಲಿದೆ. ಹಾಗಾಗಿ ನಾವೆಲ್ಲರೂ ಸೇರಿ ಬೆಂಗಳೂರನ್ನು ಜಾಗತಿಕವಾಗಿ ಬೆಳೆಸೋಣ ಎಂದು ತಿಳಿಸಿದರು.
Addressing the gathering at the inauguration of our namma raste- a 3 days workshop program organized at BBMP headquarters under #BrandBengaluru , spoke about the intention behind this initiative , highlighting the design aspect of roads & footpaths to improve pedestrian safety.… pic.twitter.com/V4iYNXJGrO
— DK Shivakumar (@DKShivakumar) February 20, 2025