ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಮತ್ತೆ ಇಂದು ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ್ದಾರೆ. ಸುರಿಯುತ್ತಿರುವ ಜಿಟಿ ಜಿಟಿ ಮಳೆಯ ನಡುವೆಯೇ ಸಿಟಿ ರೌಂಡ್ಸ್ ಹಾಕಿದ್ದಾರೆ.
ನಂತರ ಸುದ್ದಿಗಾರರ ಮಾತನಾಡಿದ ಡಿಕೆಶಿ ಸರ್ವಜ್ಞ ನಗರ ಕ್ಷೇತ್ರದಲ್ಲಿ ಟ್ರಾಫಿಕ್ ಸಮಸ್ಯೆ ಐಟಿಸಿ ರಸ್ತೆ ಫ್ಲೈ ಓವರ್ ವಿಸ್ತಿರ್ಣ ಹಾಗೂ ಎರಡು ಜಾಗದಲ್ಲಿ ಪಾರ್ಕ್ ಮಾಡಲು ಸಾರ್ವಜನಿಕರ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಸಾರ್ವಜನಿಕರು ಮನವಿ ಮಾಡಿದ್ದರು ಈ ಹಿಂದೆ ಬಿಜೆಪಿ ಸರ್ಕಾರ ಮಾಡಿಲ್ಲ. ಈಗ ಮತ್ತೆ ನಮ್ಮ ಸರ್ಕಾರದ ಮುಂದೆ ಜನರು ಪ್ರಸ್ತಾವನೆ ಇಟ್ಟಿದ್ದಾರೆ ಎಂದರು.ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿಯೂ ಡಿಸಿಎಂ ಡಿಕೆಶಿ ಹೇಳಿದರು.
ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಸಚಿವ ಸತೀಶ್ ಜಾರಕಿಹೊಳಿ
ನವದೆಹಲಿ : ಶಿರಾಡಿ ಘಾಟ್ ಸುರಂಗ ನಿರ್ಮಾಣ,ಗೋಕಾಕ್ ನಗರದಲ್ಲಿ ಎಲಿವೇಟೆಡ್ ಕಾರ್ಡ್ ನಿರ್ಮಾಣ,ಬೆಳಗಾವಿ ನಗರದ ಹಳೆಯ NH 4 ನ ಪುಣೆ ಬೆಂಗಳೂರು ರಸ್ತೆಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಸೇರಿದಂತೆ ರಾಜ್ಯದ 20 ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಚರ್ಚಿಸಿದ್ದಾರೆ.
ನವದೆಹಲಿಯಲ್ಲಿ ಭೇಟಿಯಾದ ಅವರು ಯೋಜನೆಗಳಿಗೆ ವೇಗ ನೀಡಲು ಮನವಿ ಮಾಡಿದ್ದಾರೆ ಕೇಂದ್ರ ಸಚಿವರು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಯೋಚನೆಗಳ ರೂಪರೇಷೆ ಸಿದ್ಧಪಡಿಸಿ ಸಲ್ಲಿಸುವಂತೆ ತಿಳಿಸಿರುತ್ತಾರೆ ಎಂದು ಲೋಕೋಪಯೋಗಿ ಸಚಿವರು ಹೇಳಿದರು.