ಬೆಂಗಳೂರು : ಅಂತರಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ವಿಧಾನಸೌಧದ ಎದುರು ಡಿಸಿಎಂ ಡಿಕೆ ಶಿವಕುಮಾರ್ ಯೋಗ ಪ್ರದರ್ಶಿಸಿದರು.
ವಿಧಾನಸೌಧದ ಎದುರು ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಯೋಗ ಪ್ರದರ್ಶಿಸಿದರು. ಈ ವೇಳೆ ಕ್ರಿಕೆಟಿಗ ಮನೀಶ್ ಪಾಂಡೆ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.
ನಂತರ ಮಾತನಾಡಿದ ಡಿಕೆಶಿ ‘ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದ್ದು, ಸಾವಿರಾರು ವರ್ಷಗಳ ಹಿಂದೆಯೇ ಇದನ್ನು ಜಗತ್ತಿಗೆ ಪರಿಚಯಿಸಿದ ಹೆಗ್ಗಳಿಕೆ ಭಾರತ ದೇಶದ್ದು. ನಮಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೋ, ಆಂತರಿಕ ಸೌಂದರ್ಯವು ಅಷ್ಟೇ ಮುಖ್ಯವಾಗಿರುತ್ತದೆ. ಇವೆರಡನ್ನು ಚೆನ್ನಾಗಿ ಇಟ್ಟುಕೊಳ್ಳಲು ಯೋಗವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿ ನಿತ್ಯ ನಾವು ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ. ಹಾಗಾಗಿ ಯೋಗವನ್ನು ನಮ್ಮ ಜೀವನದ ಒಂದು ಭಾಗವಾಗಿ ರೂಢಿಸಿಕೊಂಡು, ಪ್ರತಿ ದಿನ ಯೋಗ ಮಾಡೋಣ ಹಾಗೂ ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳೋಣ’ ಎಂದು ಕರೆ ನೀಡಿದರು.