ಬೆಂಗಳೂರು : ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದ ಎಸ್.ಎಂ ಕೃಷ್ಣ ರನ್ನು ಭೇಟಿಯಾಗಿದ್ದ ಡಿಸಿಎಂ ಡಿಕೆ ಶಿವಕುಮಾರ್ ಹಳೇ ಫೋಟೋ ಹಂಚಿಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಶ್ರೀ ಎಸ್.ಎಂ. ಕೃಷ್ಣ ಅವರು ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಕಗೊಂಡಾಗ ಅಲ್ಲಿನ ರಾಜ್ಯಪಾಲರ ವಸತಿಗೃಹದಲ್ಲಿ ಭೇಟಿಯಾಗಿ, ಶುಭ ಹಾರೈಸಿದ್ದೆ. ಆ ಕ್ಷಣಗಳು ಇನ್ನೂ ಕೂಡ ನೆನಪಿವೆ ಎಂದು ಡಿಸಿಎಂ ಡಿಕೆಶಿ ಟ್ವೀಟ್ ಮಾಡಿದ್ದಾರೆ.
. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ 2018 ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪಡೆದರು.
ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಶ್ರೀ ಎಸ್.ಎಂ. ಕೃಷ್ಣ ಅವರು ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಕಗೊಂಡಾಗ ಅಲ್ಲಿನ ರಾಜ್ಯಪಾಲರ ವಸತಿಗೃಹದಲ್ಲಿ ಭೇಟಿಯಾಗಿ, ಶುಭ ಹಾರೈಸಿದ್ದೆ. ಆ ಕ್ಷಣಗಳು ಇನ್ನೂ ಕೂಡ ನೆನಪಿವೆ.#SMKrishna pic.twitter.com/PTZ7ezx7h7
— DK Shivakumar (@DKShivakumar) December 11, 2024