alex Certify ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆ ವಿರುದ್ಧ ಸಮರಕ್ಕೆ ಸಜ್ಜಾದ ಮಹಿಳಾ ಆಯೋಗ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆ ವಿರುದ್ಧ ಸಮರಕ್ಕೆ ಸಜ್ಜಾದ ಮಹಿಳಾ ಆಯೋಗ..!

ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ದಂಪತಿಯ ಪುತ್ರಿಗೆ ಆನ್​ಲೈನ್​​ನಲ್ಲಿ ಅತ್ಯಾಚಾರದ ಬೆದರಿಕೆಗಳನ್ನು ಹಾಕಲಾಗುತ್ತಿದೆ ಎಂಬ ವರದಿಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವುದಾಗಿ ದೆಹಲಿ ಮಹಿಳಾ ಆಯೋಗ ಮಾಹಿತಿ ನೀಡಿದೆ. ಈ ಸಂಬಂಧ ದೆಹಲಿ ಪೊಲೀಸರಿಗೆ ನೋಟಿಸ್​ ನೀಡಿದ ಆಯೋಗವು ಇದೊಂದು ಗಂಭೀರ ವಿಚಾರವಾಗಿದ್ದು ಶೀಘ್ರವೇ ಈ ಸಂಬಂಧ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ.

ಟ್ವಿಟರ್​ನಲ್ಲಿ ವಿರಾಟ್​ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿಯ ಪುತ್ರಿಗೆ ಅತ್ಯಾಚಾರದ ಬೆದರಿಕೆ ಹಾಕುತ್ತಿರುವ ಆರೋಪಗಳ ಅಡಿಯಲ್ಲಿ ದೆಹಲಿ ಮಹಿಳಾ ಆಯೋಗವು ಪೊಲೀಸರಿಗೆ ನೋಟಿಸ್​ ಕಳುಹಿಸಿದೆ. ಚೇರ್​ ಪರ್ಸನ್​​ ಸ್ವಾತಿ ಮಾಲಿವಾಲ್​ ಇದೊಂದು ನಾಚಿಕೆಗೇಡಿನ ಸಂಗತಿಯಾಗಿದ್ದು ಕೂಡಲೇ ತಪ್ಪಿತಸ್ಥರನ್ನು ಬಂಧಿಸುವಂತಾಗಬೇಕು ಎಂದು ಹೇಳಿದ್ದಾರೆ ಎಂದು ಆಯೋಗವು ಟ್ವೀಟ್​ ಮಾಡಿದೆ.

ಮಹಮ್ಮದ್​ ಶಮಿ ಪರ ವಹಿಸಿ ಮಾತನಾಡಿದ ಕಾರಣಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ವಿರುದ್ಧ ಆಕ್ರೋಶ ಹೊರಹಾಕಿದ್ದ ಕಿಡಿಗೇಡಿ ಸಮೂಹ ಕೊಹ್ಲಿಯ 9 ತಿಂಗಳ ಮಗು ವಮಿಕಾ ಕೊಹ್ಲಿಗೆ ಟ್ವಿಟರ್​ನಲ್ಲಿ ಅತ್ಯಾಚಾರದ ಬೆದರಿಕೆಯನ್ನೊಡ್ಡಿತ್ತು.

— Delhi Commission for Women – DCW (@DCWDelhi) November 2, 2021

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...