ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರ್ತಿದೆ. ಆದ್ರೆ ಮೂರನೇ ಅಲೆ ಭಯವಿದೆ. ಇದೇ ಕಾರಣಕ್ಕೆ ದೆಹಲಿ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.
ದೆಹಲಿಯಲ್ಲಿ ಕೊರೊನಾ ಸೋಂಕು ಇಳಿಕೆ ಕಾಣುತ್ತಿದ್ದರೂ, ಯಾವುದೇ ರಿಸ್ಕ್ ತೆಗೆದುಕೊಳ್ಳಲು ದೆಹಲಿ ಸರ್ಕಾರ ಸಿದ್ಧವಿಲ್ಲ. ಕೊರೊನಾ ಲಸಿಕೆ ತೆಗೆದುಕೊಳ್ಳುವಂತೆ ಪ್ರತಿಯೊಬ್ಬರನ್ನು ಪ್ರೋತ್ಸಾಹಿಸುತ್ತಿದೆ. ಜನರಿಗೆ ಆದಷ್ಟು ಬೇಗ ಕೊರೊನಾ ಲಸಿಕೆ ನೀಡುವ ಗುರಿಯನ್ನು ದೆಹಲಿ ಸರ್ಕಾರ ಹೊಂದಿದೆ.
ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ,ಕೊರೊನಾ ವಿಷ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಸರ್ಕಾರಿ ಉದ್ಯೋಗಿಗಳು ಅಕ್ಟೋಬರ್ 15 ರವರೆಗೆ ಕೊರೊನಾ ಲಸಿಕೆ ಮೊದಲ ಡೋಸ್ ತೆಗೆದುಕೊಳ್ಳುವುದು ಕಡ್ಡಾಯವೆಂದು ಡಿಡಿಎಂಎ ಹೇಳಿದೆ. ಒಂದು ವೇಳೆ ಸಿಬ್ಬಂದಿ ಇದನ್ನು ಪಾಲಿಸದೆ ಹೋದ್ರೆ, ಲಸಿಕೆ ಪಡೆಯದ ಸಿಬ್ಬಂದಿಗೆ ಆನ್ ಲಿವ್ ಮಾರ್ಕ್ ನೀಡಲು ನಿರ್ಧರಿಸಲಾಗಿದೆ.
ಡಿಡಿಎಂಎ ರಾಜ್ಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಮತ್ತು ದೆಹಲಿಯ ಮುಖ್ಯ ಕಾರ್ಯದರ್ಶಿ ವಿಜಯ್ ದೇವ್, ಶುಕ್ರವಾರ ಹೊಸ ಆದೇಶವನ್ನು ಹೊರಡಿಸಿದ್ದಾರೆ. ಅಕ್ಟೋಬರ್ 15 ರ ಮೊದಲು, ಎಲ್ಲಾ ಸರ್ಕಾರಿ ಉದ್ಯೋಗಿಗಳು ಕೊರೊನಾ ಲಸಿಕೆ ತೆಗೆದುಕೊಳ್ಳಬೇಕೆಂದು ಅವರು ಹೇಳಿದ್ದಾರೆ.
ಸರ್ಕಾರಿ ನೌಕರರು ಮಾತ್ರವಲ್ಲ ದೆಹಲಿ ಸರ್ಕಾರದ ಅಡಿಯಲ್ಲಿ ಬರುವ ಸರ್ಕಾರ, ಸ್ವಾಯತ್ತ ಸಂಸ್ಥೆಗಳು, ಪಿಎಸ್ಯುಗಳು, ಸ್ಥಳೀಯ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಕೂಡ ಅಕ್ಟೋಬರ್ 15ರೊಳಗೆ ಕೊರೊನಾ ಲಸಿಕೆ ಪಡೆಯುವುದು ಕಡ್ಡಾಯವಾಗಿದೆ.