alex Certify BREAKING: ವಿಜಯಪುರ ಡಿಡಿಪಿಐ, ಇಬ್ಬರು ಹಿರಿಯ ಉಪನ್ಯಾಸಕರು ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಿಜಯಪುರ ಡಿಡಿಪಿಐ, ಇಬ್ಬರು ಹಿರಿಯ ಉಪನ್ಯಾಸಕರು ಅಮಾನತು

ವಿಜಯಪುರ: ವಿಜಯಪುರ ಡಿಡಿಪಿಐ ಮತ್ತು ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು ಮಾಡಲಾಗಿದೆ. IEDSS ಯೋಜನೆ ಅನುಷ್ಠಾನ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆಯಲ್ಲಿ ವಿಜಯಪುರ ಡಿಡಿಪಿಐ ಎನ್.ಹೆಚ್ ನಾಗೂರ ಹಾಗೂ ವಿಜಯಪುರ ಡಯಟ್ ನ ಹಿರಿಯ ಉಪನ್ಯಾಸಕರಾದ ಎಸ್.ಎ. ಮುಜಾವರ, ಎ.ಎಸ್. ಹತ್ತಳ್ಳಿ ಅವರನ್ನು ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ

ಇಲಾಖೆ ವಿಚಾರಣೆ ಕಾಯ್ದಿರಿಸಿ ಮೂವರನ್ನು ಅಮಾನತು ಮಾಡಲಾಗಿದೆ. ಇವರು 2009 -10, 2011- 12 ರಲ್ಲಿ ಐಇಡಿಎಸ್ಎಸ್ ಅನುದಾನ ದುರುಪಯೋಗಪಡಿಸಿಕೊಂಡ ಆರೋಪವಿದೆ. ಸ್ವಯಂ ಸೇವಾ ಸಂಸ್ಥೆಗಳಿಗೆ ಅನುದಾನ ಬಿಡುಗಡೆಗೆ ನಿಯಮ ಬಾಹಿರವಾಗಿ ಶಿಫಾರಸು ಮಾಡಲಾಗಿದೆ. ಅಸ್ತಿತ್ವದಲ್ಲಿ ಇಲ್ಲದ ಎನ್‌ಜಿಒಗಳಿಗೆ ಹಣ ಬಿಡುಗಡೆಯಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ಅಮಾನತು ಆದೇಶ ಹೊರಡಿಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...