alex Certify ಸ್ನಾನ ಮಾಡುವಾಗಲೇ ಕಾದಿತ್ತು ದುರ್ವಿದಿ, ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಕಟ್ಟಿ ವೈದ್ಯಕೀಯ ವಿದ್ಯಾರ್ಥಿನಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ನಾನ ಮಾಡುವಾಗಲೇ ಕಾದಿತ್ತು ದುರ್ವಿದಿ, ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಕಟ್ಟಿ ವೈದ್ಯಕೀಯ ವಿದ್ಯಾರ್ಥಿನಿ ಸಾವು

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ನಾನ ಮಾಡುವ ಸಂದರ್ಭದಲ್ಲಿ ಉಸಿರುಕಟ್ಟಿ ವೈದ್ಯಕೀಯ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.

ಶನಿವಾರ ಘಟನೆ ನಡೆದಿದೆ. ಗ್ಯಾಸ್ ಗೀಸರ್ ಆನ್ ಮಾಡಿಕೊಂಡು ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿನಿ ಉಸಿರುಕಟ್ಟಿ ಮೃತಪಟ್ಟಿದ್ದಾರೆ. ಗೀಸರ್ ಆನ್ ಮಾಡಿಕೊಂಡು ಸ್ನಾನ ಮಾಡುತ್ತಿದ್ದ ವೇಳೆಯಲ್ಲಿ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆನ್ನಲಾಗಿದೆ.

ಬಹಳ ಹೊತ್ತಾದರೂ ವಿದ್ಯಾರ್ಥಿನಿ ಹೊರಗೆ ಬಾರದ ಕಾರಣ ಸ್ನೇಹಿತೆಯರು ಆತಂಕಗೊಂಡು, ಬಾಗಿಲು ಮುರಿದು ನೋಡಿದಾಗ ಮೃತಪಟ್ಟಿರುವುದು ಗೊತ್ತಾಗಿದೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...