
ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿರುವ ಬರ್ತಡೇ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಸ್ಪೋಟದಿಂದ ಉಂಟಾದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ವಿಜಯಲಕ್ಷ್ಮಿ(34), ಮಾಳೇಶ್(27) ಗೌರವ್ವ(45) ಮೃತಪಟ್ಟವರು ಎಂದು ಹೇಳಲಾಗಿದೆ. ನಿನ್ನೆ ಸರಣಿ ಸ್ಫೋಟ ಸಂಭವಿಸಿ ಫ್ಯಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೂವರು ಮೃತಪಟ್ಟಿದ್ದಾರೆ.