ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ, ಮಗನ ಮೃತದೇಹ ಪತ್ತೆಯಾಗಿವೆ. ಬೆಂಗಳೂರಿನ ಹೊಸಗುಡ್ಡದಹಳ್ಳಿಯ ಮನೆಯಲ್ಲಿ ಶವಗಳು ಪತ್ತೆಯಾಗಿವೆ.
ಲಕ್ಷ್ಮಮ್ಮ(48), ಮದನ್(13) ಮೃತಪಟ್ಟವರು ಎಂದು ಹೇಳಲಾಗಿದೆ. ಇಬ್ಬರ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಗನನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.