
ಬೆಂಗಳೂರು: ನಿನ್ನೆ ಮಕ್ಕಳಿಗೆ ತಿಂಡಿ ತರಲು ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದ ಬಳಿ ನಡೆದಿದೆ.
ಯಾಸಿನ್(26) ಶವವಾಗಿ ಪತ್ತೆಯಾದ ವ್ಯಕ್ತಿ. ಅನುಮಾನಾಸ್ಪದ ರೀತಿಯಲ್ಲಿ ಅವರು ಪತ್ತೆಯಾಗಿದ್ದಾರೆ. ಖಾಸಗಿ ಶಾಲೆಯಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಯಾಸಿನ್ ನಿನ್ನೆ ಮಕ್ಕಳಿಗೆ ತಿಂಡಿ ತರಲು ಹೊರಗೆ ಹೋಗಿ ನಾಪತ್ತೆಯಾಗಿದ್ದರು. ಯಲ್ಲಮ್ಮ ದೇವಾಲಯದ ನಿರ್ಜನ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಸೂರ್ಯಸಿಟಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.