
ಮೈಸೂರು: ಬಂಚಳ್ಳಿ ಹುಂಡಿ ಗ್ರಾಮದಲ್ಲಿ ಮನೆಯಲ್ಲೇ ವೃದ್ಧೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
65 ವರ್ಷದ ದೇವಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಂಚಳ್ಳಿ ಹುಂಡಿ ಗ್ರಾಮದಲ್ಲಿ ದೇವಮ್ಮ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹ ಮನೆಯ ಮಂಚದ ಕೆಳಗೆ ಪತ್ತೆಯಾಗಿದೆ. ಆಸ್ತಿಗಾಗಿ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ನಂಜನಗೂಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.