ಕೋಲಾರ: ಕಲ್ಲು ಕ್ವಾರಿ ಹಳ್ಳದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೃತದೇಹ ಪತ್ತೆಯಾಗಿದೆ. ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಸಮೀಪ ಕಲ್ಲು ಕ್ವಾರಿಯಲ್ಲಿ ಬಳ್ಳಾರಿ ಮೂಲದ ಮೆಡಿಕಲ್ ವಿದ್ಯಾರ್ಥಿನಿ ದರ್ಶಿನಿ(24) ಮೃತದೇಹ ಪತ್ತೆಯಾಗಿದೆ.
ಹೊಸಕೋಟೆ ತಾಲೂಕಿನ ವೈದ್ಯ ಕಾಲೇಜು ವಿದ್ಯಾರ್ಥಿನಿಯಾಗಿರುವ ದರ್ಶಿನಿ ಸ್ನೇಹಿತರಿಗೆ ಫೋನ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು ಎನ್ನಲಾಗಿದೆ. ದರ್ಶಿನಿಯ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರ ತೆಗೆದಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.