ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ಟೊಂಗ್ರಾದಲ್ಲಿನ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ಸೇವಿಸಿದ ನಂತರ ಕನಿಷ್ಠ 65 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.
ವಿದ್ಯಾರ್ಥಿಗಳು ಊಟ ಮಾಡಿದ ಸ್ವಲ್ಪ ಸಮಯದ ನಂತರ ವಾಂತಿ ಮಾಡಲು ಪ್ರಾರಂಭಿಸಿದರು, ತಕ್ಷಣವೇ ವೈದ್ಯಕೀಯ ಚಿಕಿತ್ಸೆ ಕೊಡಿಸಲಾಗಿದೆ.
ಅಧಿಕಾರಿಗಳ ಪ್ರಕಾರ, ಊಟದಲ್ಲಿ ಸತ್ತ ಊಸರವಳ್ಳಿ ಕಂಡುಬಂದಿದೆ. ವಿದ್ಯಾರ್ಥಿಗಳನ್ನು ತಕ್ಷಣವೇ ಮಸಾಲಿಯಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಬ್ಲಾಕ್ ಡೆವಲಪ್‌ಮೆಂಟ್ ಆಫೀಸರ್(ಬಿಡಿಒ) ಅಜ್ಫರ್ ಹುಸ್ನೇನ್ ಅವರು ಘಟನೆಯನ್ನು ದೃಢಪಡಿಸಿದರು “ವಿದ್ಯಾರ್ಥಿಗಳು ತಮ್ಮ ಊಟದಲ್ಲಿ ಸತ್ತ ಗೋಸುಂಬೆಯನ್ನು ಕಂಡುಕೊಂಡಿದ್ದಾರೆ. ಅವರು ವೈದ್ಯಕೀಯ ಆರೈಕೆಯನ್ನು ಪಡೆಯುತ್ತಿದ್ದಾರೆ ಮತ್ತು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಟೋಂಗ್ರಾ ಪೊಲೀಸ್ ಠಾಣೆಯ ಉಸ್ತುವಾರಿ ಗುರುಚರಣ್ ಮಾಂಝಿ ಹೇಳಿದ್ದಾರೆ.