alex Certify BREAKING: ಮನೆ ಮೇಲೆ ಕಾಂಪೌಂಡ್ ಕುಸಿದು ದುರಂತ, ಮಲಗಿದ್ದಲ್ಲೇ ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮನೆ ಮೇಲೆ ಕಾಂಪೌಂಡ್ ಕುಸಿದು ದುರಂತ, ಮಲಗಿದ್ದಲ್ಲೇ ಇಬ್ಬರ ಸಾವು

ಬೆಂಗಳೂರು: ಶೀಟ್ ಮನೆಯ ಮೇಲೆ ಕಾಂಪೌಂಡ್ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಬಿನ್ನಮಂಗಲದಲ್ಲಿ ಘಟನೆ ನಡೆದಿದೆ.

ಅಣ್ಣ ವೇಣುಗೋಪಾಲ(22), ತಂಗಿ ಕಾವ್ಯ(20) ಮೃತಪಟ್ಟವರು ಎಂದು ಹೇಳಲಾಗಿದೆ. ಮತ್ತೊಬ್ಬರು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳೆಯಿಂದಾಗಿ ಕಾಂಪೌಂಡ್ ಕುಸಿದುಬಿದ್ದಿದ್ದರಿಂದ ಅವಘಡ ಸಂಭವಿಸಿದೆ. ತಗ್ಗು ಪ್ರದೇಶದ ಶೀಟ್ ಮನೆ ಮೇಲೆ ಕಾಂಪೌಂಡ್ ಕುಸಿದು ಬಿದ್ದು ದುರಂತ ಸಂಭವಿಸಿದೆ. ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...