alex Certify ರಾಜ್ಯದಲ್ಲಿಂದು 315 ಜನರಿಗೆ ಸೋಂಕು: ಇಲ್ಲಿದೆ ಜಿಲ್ಲಾವಾರು ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 315 ಜನರಿಗೆ ಸೋಂಕು: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 315 ಜನರಿಗೆ ಸೋಂಕು ತಗುಲಿರುವುದು ದೃಢಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,95,600 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 38,198 ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು 236 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 29,50,542 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.40 ರಷ್ಟು ಇದೆ. ರಾಜ್ಯದಲ್ಲಿ 6831 ಸಕ್ರಿಯ ಪ್ರಕರಣಗಳು ಇವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 152 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 142 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5287 ಸಕ್ರಿಯ ಪ್ರಕರಣಗಳು ಇವೆ.

ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಗದಗ, ಹಾವೇರಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 152, ದಕ್ಷಿಣಕನ್ನಡ 19, ಧಾರವಾಡ 49, ಮೈಸೂರು 26, ಶಿವಮೊಗ್ಗ 10, ತುಮಕೂರು 11, ಉಡುಪಿ 10 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...