ಚಿಕ್ಕಮಗಳೂರು: ಕೊರೊನಾದಿಂದ ಮೃತಪಟ್ಟ ಮಹಿಳೆ ಮೈಮೇಲಿದ್ದ ಚಿನ್ನಾಭರಣಗಳನ್ನು ದೋಚಿದ ಆರೋಪ ಕೇಳಿಬಂದಿದೆ.
ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಆಭರಣ ಕಳವು ಮಾಡಿದ ಆರೋಪ ಕೇಳಿಬಂದಿದೆ. ಉಸಿರಾಟದ ಸಮಸ್ಯೆಯಿಂದ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಯಳವರಟ್ಟಿ ಗ್ರಾಮದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಅವರ ಸುಮಾರು 50 ಗ್ರಾಂ ಮಾಂಗಲ್ಯ ಸರವನ್ನು ಅಪಹರಿಸಲಾಗಿದೆ. ಮೃತ ಮಹಿಳೆ ಕುಟುಂಬದವರು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಈ ಕುರಿತಾಗಿ ದೂರು ನೀಡಿದ್ದಾರೆ ಎನ್ನಲಾಗಿದೆ.