
ಹಾವೇರಿ: ಹಾವೇರಿ ಜಿಲ್ಲೆಯ ಹಲವು ಕಡೆ ಗುಡುಗು ಸಿಡಿಲು ಆರ್ಭಟದೊಂದಿಗೆ ಮಳೆಯಾಗಿದ್ದು, ಸಿಡಿಲು ಬಡಿದು ಕುರಿಗಾಹಿ ಸಾವನ್ನಪ್ಪಿದ್ದಾರೆ.
ನಾಗರಾಜ ಮುದ್ನಾಳ(22) ಮೃತಪಟ್ಟವರು ಎಂದು ಹೇಳಲಾಗಿದೆ. ಹಾನಗಲ್ ತಾಲೂಕಿನ ಮಹಾರಾಜಪೇಟೆ ಗ್ರಾಮದ ಬಳಿ ಘಟನೆ ನಡೆದಿದೆ. ಹೊಲದಲ್ಲಿ ಕುರಿ ಮೇಯಿಸುತ್ತಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಸಿಡಿಲು ಬಡಿದು ಸುರೇಶ ಮುದ್ನಾಳ(25) ಸ್ಥಿತಿ ಗಂಭೀರವಾಗಿದೆ. ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ನಾಳ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.