ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ದುರಂತ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತೇಜಸ್ ಸುತಾರೆ ಮೃತಪಟ್ಟಿದ್ದಾರೆ. ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಡಿಸೆಂಬರ್ 22ರಂದು ಹುಬ್ಬಳ್ಳಿ ಸಾಯಿ ನಗರದ ದೇವಾಲಯದಲ್ಲಿ ಸಿಲಿಂಡರ್ ಸ್ಫೋಟಗೊಂಡು 9 ಜನ ಗಾಯಗೊಂಡಿದ್ದರು. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರಿಗೆ ಚಿಕಿತ್ಸೆ ಮುಂದುವರೆದಿದೆ.