alex Certify ಕಂಬದಲ್ಲಿ ವಿದ್ಯುತ್ ಲೈನ್ ಸರಿಪಡಿಸುವಾಗಲೇ ಅವಘಡ: ಲೈನ್ ಮ್ಯಾನ್ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಂಬದಲ್ಲಿ ವಿದ್ಯುತ್ ಲೈನ್ ಸರಿಪಡಿಸುವಾಗಲೇ ಅವಘಡ: ಲೈನ್ ಮ್ಯಾನ್ ಸಾವು

ಬಾಗಲಕೋಟೆ: ಕಂಬದಲ್ಲಿ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿದ ಘಟನೆ ಜಮಖಂಡಿ ತಾಲೂಕಿನ ಜಂಬಗಿ ಬಿ.ಕೆ. ಗ್ರಾಮದಲ್ಲಿ ನಡೆದಿದೆ.

ಸಾವಳಗಿ ಹೆಸ್ಕಾಂ ಸಿಬ್ಬಂದಿ ಪರಶುರಾಮ ಪಾಯಗೊಂಡ(30) ಮೃತಪಟ್ಟವರು ಎಂದು ಹೇಳಲಾಗಿದೆ. ರಬಕವಿ -ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮದ ನಿವಾಸಿ ಪರಶುರಾಮ ಕಂಬದಲ್ಲಿ ವಿದ್ಯುತ್ ತಂತಿ ದುರಸ್ತಿ ಮಾಡುವ ವೇಳೆ ಘಟನೆ ನಡೆದಿದೆ. ಸ್ಥಳಕ್ಕೆ ಬಾರದ ಹೆಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಂಬಗಿ ಬಿ.ಕೆ. ಗ್ರಾಮದಲ್ಲಿ ರಸ್ತೆ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸಾವಳಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...