alex Certify ಮದುವೆ ಮೆರವಣಿಗೆ ಮೇಲೆ ಹರಿದ ಡಿಜೆ ಲಾರಿ, ನಾಲ್ವರು ಸಾವು: 10 ಕ್ಕೂ ಅಧಿಕ ಜನರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ಮೆರವಣಿಗೆ ಮೇಲೆ ಹರಿದ ಡಿಜೆ ಲಾರಿ, ನಾಲ್ವರು ಸಾವು: 10 ಕ್ಕೂ ಅಧಿಕ ಜನರಿಗೆ ಗಾಯ

ಕಲಬುರ್ಗಿ: ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಕಡತಾಲ ತಾಂಡಾದಲ್ಲಿ ಬುಧವಾರ ರಾತ್ರಿ ಮದುವೆ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದವರ ಮೇಲೆ ಡಿಜೆ ಲಾರಿ ಹರಿದು ನಾಲ್ವರು ಮೃತಪಟ್ಟಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸುಗುಣ ಬಾಯಿ ಚವಾಣ್(40), ವಿಜಿ ಬಾಯಿ ರಾಥೋಡ್(30), ಕುಮಾರನಾಯ್ಕ್(35) ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಕಡತಾಲ ತಾಂಡಾದಲ್ಲಿ ನಿಗದಿಯಾಗಿದ್ದ ಮದುವೆಗೆ ಮದುಮಗಳನ್ನು ಕರೆದುಕೊಂಡು ಬಂದ ಸಂದರ್ಭದಲ್ಲಿ ಸಂಭ್ರಮದಿಂದ ಸ್ವಾಗತಿಸಲು ತೆಲಂಗಾಣದಿಂದ ಡಿಜೆ ತರಿಸಲಾಗಿತ್ತು. ಡ್ಯಾನ್ಸ್ ಮಾಡಿಕೊಂಡು ಮೆರವಣಿಗೆ ಸಾಗುತ್ತಿದ್ದ ವೇಳೆ ಸಂಬಂಧಿಕರು ನೆಂಟರು ಕುಣಿದು ಕುಪ್ಪಳಿಸುತ್ತಿದ್ದರು. ಆಗ ಡಿಜೆ ಇದ್ದ ಮಿನಿ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ದುರಂತದಲ್ಲಿ 10 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಕಲಬುರಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಲಾರಿ ಚಾಲಕ ಇಲ್ಲದ ವೇಳೆಯಲ್ಲಿ ಅಪರಿಚಿತ ವ್ಯಕ್ತಿ ಚಾಲನೆ ಮಾಡಿದ್ದೇ ದುರಂತಕ್ಕೆ ಕಾರಣವೆನ್ನಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...