alex Certify ‘ಡೆಡ್ಲಿ ಕಿಲ್ಲರ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಡೆಡ್ಲಿ ಕಿಲ್ಲರ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಅಭಯ್ ವೀರ್ ನಟನೆಯ ಬಹು ನಿರೀಕ್ಷಿತ ‘ಡೆಡ್ಲಿ ಕಿಲ್ಲರ್’ ಚಿತ್ರದ ಲಿರಿಕಲ್ ಹಾಡೊಂದನ್ನು ಗೋಲ್ಡನ್ ಸ್ಟಾರ್ ಗಣೇಶ್ ಇಂದು ಲಾಂಚ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಏ2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿರುವ ಈ ಹಾಡು ಸಾಕಷ್ಟು ವೀಕ್ಷಣೆ ಗಳಿಸಿದ್ದು, ಕೇಳುಗರಿಂದ ಉತ್ತಮ  ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ‘ಶ್ರುತಿಯಾಗಿ ನೀ ಸೇರು’ ಎಂಬ ಈ ಹಾಡಿಗೆ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಧ್ವನಿಯಾಗಿದ್ದು, ವಿನು ಮನಸು ಸಂಗೀತ ಸಂಯೋಜನೆ ನೀಡಿದ್ದಾರೆ. ಥ್ರಿಲ್ಲರ್ ಮಂಜು ಸಾಹಿತ್ಯವಿದೆ.

ಥ್ರಿಲ್ಲರ್ ಮಂಜು ನಿರ್ದೇಶನದ ಈ ಚಿತ್ರದಲ್ಲಿ ಅಭಯ್ ವೀರ್ ಸೇರಿದಂತೆ ನಿಷ್ವಿಕ, ಥ್ರಿಲ್ಲರ್ ಮಂಜು, ಸುನಿಲ್, ಲೋಕೇಂದ್ರ ಸೂರ್ಯ  ತೆರೆ ಹಂಚಿಕೊಂಡಿದ್ದಾರೆ. ಕೀರ್ತಿ ಸಿಲ್ವರ್ ಸ್ಕ್ರೀನ್ ಮತ್ತು ವೇದಿಕ ಕೋಸ್ಮಸ್ ಬ್ಯಾನರ್ ನಡಿ ಪ್ರಶಾಂತ್ ತಂಬ್ರಳ್ಳಿ ಮಟ್‌ ನಿರ್ಮಾಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...