ಬೆಂಗಳೂರು : “ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಿಸಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಹೊರ ರಾಜ್ಯದ ಜನರೊಂದಿಗೆ ಕನ್ನಡದಲ್ಲೇ ವ್ಯವಹರಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
“ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಿಸಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಿಸುವುದು ಬಹಳ ಅವಶ್ಯಕವಾಗಿದೆ. ಪ್ರತಿಯೊಬ್ಬರೂ ಕರ್ನಾಟಕದಲ್ಲಿ ಬಾಳಿ ಬದುಕುವುದರೊಂದಿಗೆ ಕನ್ನಡದಲ್ಲಿಯೇ ಮಾತನಾಡುತ್ತೇನೆ ಹಾಗೂ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡುವುದಿಲ್ಲ ಎಂದು ನಿರ್ಧರಿಸಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದ್ದಾರೆ.
“ಕನ್ನಡಿಗರು ಉದಾರಿಗಳು. ಹಾಗಾಗಿ ಅನ್ಯ ಭಾಷಿಗರು ಕನ್ನಡ ಕಲಿಯದೆ ಬದುಕುವ ವಾತಾವರಣ ಕರ್ನಾಟಕದಲ್ಲಿದೆ. ತಮಿಳುನಾಡು, ಆಂಧ್ರ, ಕೇರಳಕ್ಕೆ ಹೋದರೆ ಅವರ ಮಾತೃಭಾಷೆಯಲ್ಲೇ ಮಾತನಾಡುತ್ತಾರೆ. ನಾವು ಸಹ ನಮ್ಮ ಮಾತೃಭಾಷೆಯಲ್ಲೇ ವ್ಯವಹರಿಸಬೇಕು. ಅದು ನಮಗೆ ಹೆಮ್ಮೆಯ ವಿಷಯವಾಗಬೇಕೆ ಹೊರತು ಕೀಳರಿಮೆ ಪಡುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.