ನವದೆಹಲಿ : ಕೋಚಿಂಗ್ ಸೆಂಟರ್ ನಲ್ಲಿ ವಿದ್ಯಾರ್ಥಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ.
ರಾಜಿಂದರ್ ನಗರದ ಕೋಚಿಂಗ್ ಸೆಂಟರ್ನ ನೆಲಮಾಳಿಗೆಯಲ್ಲಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಮುಳುಗಿ ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಿದೆ.
ದೆಹಲಿಯಲ್ಲಿ ಐಎಎಸ್ ಕೋಚಿಂಗ್ ಸೆಂಟರ್ ಗೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದರು. ಸುರಿದ ಭಾರಿ ಮಳೆಯಿಂದಾಗಿ ಸೆಲ್ಲರ್ ನಲ್ಲಿರುವ ಕೋಚಿಂಗ್ ಸೆಂಟರ್ ನ ಗ್ರಂಥಾಲಯಕ್ಕೆ ಭಾರಿ ಪ್ರವಾಹದ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದರು. ಮೃತರನ್ನು ತೆಲಂಗಾಣದ ಮಂಚೇರಿಯಲ್ ನಿವಾಸಿ ತಾನ್ಯಾ ಸೋನಿ (25), ಉತ್ತರ ಪ್ರದೇಶದ ಶ್ರೇಯಾ ಯಾದವ್ (25) ಮತ್ತು ಕೇರಳದ ನವೀನ್ ದಾಲ್ವಿನ್ (24) ಎಂದು ಗುರುತಿಸಲಾಗಿದೆ.