
ಭೋಪಾಲ್: ಅಪ್ರಾಪ್ತ ಹೆಣ್ಣು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡುವವರು, ಲೈಂಗಿಕ ದೌರ್ಜನ್ಯ ಎಸಗುವವರಿಗೆ ಮರಣದಂಡನೆ ಶಿಕ್ಷೆ ನೀಡುವ ಕುರಿತು ಕಾನೂನಾತ್ಮಕ ಮಾರ್ಗ ಶೋಧಿಸಲಾಗುತ್ತಿದೆ. ಅದೇ ರೀತಿ ಬಲವಂತದ ಮತಾಂತರ ಮಾಡುವವರಿಗೂ ಮರಣದಂಡನೆ ಶಿಕ್ಷೆ ವಿಧಿಸಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೈಂಗಿಕ ದೌರ್ಜನ್ಯದ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ತನಿಖೆ ಮತ್ತು ಶಿಕ್ಷೆಗೆ ಕಟ್ಟಿಬದ್ಧವಾಗಿದೆ ಎಂದು ಹೇಳಿದ್ದಾರೆ.
ನಮ್ಮ ಹೆಣ್ಣು ಮಕ್ಕಳ ಮೇಲೆ ದುಷ್ಕೃತ್ಯ ಎಸಗುವವರನ್ನು ಕ್ಷಮಿಸುವ ಅಥವಾ ಕಾನೂನಿನ ಅಡಿಯಲ್ಲಿ ತಪ್ಪಿಸಿಕೊಳ್ಳಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ. ಬಲವಂತದ ಮತಾಂತರ ಮಾಡುವವರಿಗೂ ಮರಣದಂಡನೆ ಶಿಕ್ಷೆ ವಿಧಿಸಲಾಗುವುದು. ಈ ನಿಟ್ಟಿನಲ್ಲಿ ಕಾನೂನು ಮಾರ್ಗಗಳ ಪರಿಶೀಲನೆ ನಡೆದಿದೆ ಎಂದು ಅವರು ಹೇಳಿದ್ದಾರೆ.