
ಮಂಡ್ಯ: ಸಾಲಬಾಧೆಗೆ ಬೇಸತ್ತು ಮತ್ತೊಂದು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಎನ್.ಇ.ಎಸ್.ಬಡಾವಣೆಯಲ್ಲಿ ನಡೆದುದೆ.
ರಾಜೇಶ್ (45) ಹಾಗೂ ಸುಧಾ (40) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಸಾಲಬಾಧೆ ತಾಳಲಾರದೇ ವಿಷ ಸೇವಿಸಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳವಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.