![](https://kannadadunia.com/wp-content/uploads/2022/11/auto.jpg)
ಬೆಂಗಳೂರು: ಡಿಸೆಂಬರ್ 29 ರಂದು ರಾಜಧಾನಿ ಬೆಂಗಳೂರಿನಲ್ಲಿ ಆಟೋ ಸಿಗುವುದಿಲ್ಲ. ಬೆಂಗಳೂರಿನಲ್ಲಿ ಆಟೋ ಚಾಲಕರು ಡಿಸೆಂಬರ್ 29ರಂದು ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಆಟೋ ಸಂಚಾರ ಬಂದ್ ಆಗಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಡಿ. 29 ರಂದು ರಾಜಧಾನಿಯಲ್ಲಿ ಆಟೋ ಸಂಚಾರ ಬಂದ್ ಆಗಲಿದ್ದು, ಪ್ರಯಾಣಿಕರಿಗೆ ತೊಂದರೆಯಾಗಲಿದೆ ಎನ್ನಲಾಗಿದೆ.