BIG NEWS: ಅಪೆಕ್ಸ್ ಸಹಕಾರ ಸಂಘಗಳಲ್ಲಿಯೂ ಮೀಸಲಾತಿ ಕಲ್ಪಿಸಲು ಸಂಪುಟ ಸಭೆ ಮಹತ್ವದ ನಿರ್ಧಾರ

ಬೆಂಗಳೂರು: ಮಾಧ್ಯಮಿಕ, ಫೆಡರಲ್ ಮತ್ತು ಅಪೆಕ್ಸ್ ಸಂಘಗಳ ಆಡಳಿತ ಮಂಡಳಿ ಚುನಾವಣೆ, ನಾಮನಿರ್ದೇಶನಗಳಲ್ಲಿಯೂ ಮೀಸಲಾತಿ ಕಲ್ಪಿಸಲು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಎಲ್ಲಾ ವರ್ಗದವರು, ಸಮುದಾಯಗಳಿಗೂ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ- 2024 ಮತ್ತು ಕರ್ನಾಟಕ ಸೌಹಾರ್ದ ಸಹಕಾರ ತಿದ್ದುಪಡಿ ವಿಧೇಯಕ- 2024 ಅನ್ನು ಅಧಿವೇಶನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲು ತೀರ್ಮಾನ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ, ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆಯಡಿ ಬರುವ ಪ್ರಾಥಮಿಕ ಸಹಕಾರ ಸಂಘಗಳ ಮಾದರಿಯಲ್ಲಿಯೇ ಮಾಧ್ಯಮಿಕ, ಫೆಡರಲ್ ಮತ್ತು ಅಪೆಕ್ಸ್ ಸಂಘಗಳ ಆಡಳಿತ ಮಂಡಳಿಯ ಚುನಾವಣೆ ನಾಮನಿರ್ದೇಶನಗಳಲ್ಲಿ ಮೀಸಲಾತಿ ಕಲ್ಪಿಸಲು ತೀರ್ಮಾನ ಕೈಗೊಂಡಿರುವುದಾಗಿ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಎಲ್ಲಾ ಸಹಕಾರ ಸಂಘಗಳಲ್ಲಿ ಮೀಸಲಾತಿ ಕಲ್ಪಿಸಲು ನಿರ್ಧರಿಸಲಾಗಿದೆ. ಆಡಳಿತ ಮಂಡಳಿ ಚುನಾವಣೆಯಲ್ಲಿ ಎಲ್ಲಾ ಸದಸ್ಯರಿಗೂ ಸಮಾನವಾಗಿ ಮತದಾನದ ಹಕ್ಕು ನೀಡಲು, ಸಹಕಾರ ಚುನಾವಣಾ ಪ್ರಾಧಿಕಾರ ರದ್ದುಪಡಿಸಿ ನಿಬಂಧಕರ ಅಧೀನದಲ್ಲಿ ಸಹಕಾರ ಚುನಾವಣಾ ವಿಭಾಗ ರಚಿಸಲು ತೀರ್ಮಾನಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read