ಕಲಬುರಗಿ: ರಾಯಚೂರು ಮತ್ತು ಬೀದರ್ ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ರಾಯಚೂರು ಮತ್ತು ಬೀದರ್ ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.