ಬೆಳಗಾವಿ(ಸುವರ್ಣಸೌಧ): ಸರಕು ಸಾಗಣೆ ವಾಹನ ಮತ್ತು ಕ್ಯಾಬ್ ಗಳಿಗೆ ಜೀವಿತಾವಧಿ ತೆರಿಗೆ ವಿಧಿಸುವ ನಿರ್ಧಾರ ಹಿಂಪಡೆಯಲಾಗಿದ್ದು, ಮೊದಲಿನಂತೆ ತ್ರೈಮಾಸಿಕ ಅವಧಿಯಲ್ಲಿ ತೆರಿಗೆ ಸಂಗ್ರಹಿಸಲು ಅವಕಾಶ ಕಲ್ಪಿಸಲಾಗುವುದು.
ಈ ನಿಟ್ಟಿನಲ್ಲಿ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ(ಎರಡನೆ ತಿದ್ದುಪಡಿ) ವಿಧೇಯಕ ಮಂಡಿಸಲಾಗಿದೆ. ವಿಧಾನಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ವಿಧೇಯಕ ಮಂಡಿಸಿದ್ದಾರೆ.
1.5 ಟನ್ ತೂಕದಿಂದ 12 ಟನ್ ತೂಕದ ಸರಕು ಸಾಗಣೆ ವಾಹನಗಳಿಗೆ ರಾಜ್ಯದ ಹೊರಗೆ ನೋಂದಣಿಯಾಗಿರುವ ಕ್ಯಾಬ್ ಗಳಿಗೆ ಜೀವಿತಾವಧಿ ತೆರಿಗೆ ವಿಧಿಸಲು ಈ ಹಿಂದೆ ವಿಧೇಯಕ ಅಂಗೀಕರಿಸಲಾಗಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಧೇಯಕ ವಾಪಸ್ ಪಡೆದು ಈ ಮೊದಲಿನಂತೆ ತ್ರೈಮಾಸಿಕ ಅವಧಿಯಲ್ಲಿ ತೆರಿಗೆ ಸಂಗ್ರಹಿಸುವ ವಿಧೇಯಕ ಮಂಡಿಸಲಾಗಿದೆ.