ಬೆಂಗಳೂರು : 114 ತಾಲೂಕುಗಳು ಬರಪೀಡಿತ ಎಂದು ಘೋಷಿಸಿ 10 ಕೆಜಿ ಅಕ್ಕಿ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ( Muniyappa) ಘೋಷಣೆ ಮಾಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ‘ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು 10 KG ಅಕ್ಕಿ ನೀಡಲಾಗುವುದು ಎಂದು ಸಚಿವ ಕೆ ಎಚ್ ಮುನಿಯಪ್ಪ ಹೇಳಿದರು. 114 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಈ ತಾಲೂಕುಗಳಿಗೆ 10 ಕೆಜಿ ಅಕ್ಕಿ ವಿತರಣೆಗೆ ಸಿದ್ದತೆ ನಡೆಸಲಾಗುತ್ತಿದೆ . 114 ತಾಲೂಕುಗಳು ಬರಪೀಡಿತ ಎಂದು ಘೋಷಿಸಿ 10 ಕೆಜಿ ಅಕ್ಕಿ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ ಮಾಡಿದ್ದಾರೆ.
ಒಂದು ವಾರದಲ್ಲಿ ಅಕ್ಕಿ ಖರೀದಿ ಅಂತಿಮ ಆಗಲಿದೆ. ಬೆಲೆ ನಿಗದಿ ವಿಚಾರವಾಗಿ ಮಾತುಕತೆ ನಡೆಯುತ್ತಿದೆ. ತೆಲಂಗಾಣ, ಆಂಧ್ರಪ್ರದೇಶ, ಛತ್ತೀಸ ಗಢ ಸರ್ಕಾರ ಮುಂದೆ ಬಂದಿವೆ. ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಆದಷ್ಟು ಬೇಗ ಹತ್ತು ಕೆಜಿ ಅಕ್ಕಿ ನೀಡುವ ಕೆಲಸ ಮಾಡುತ್ತೇವೆ ಎಂದರು.