ಬೆಂಗಳೂರು : ವೈದ್ಯಕೀಯ ಸಿಬ್ಬಂದಿಗಳಿಗೆ ‘ಫ್ಲೂ ವ್ಯಾಕ್ಸಿನ್’ ನೀಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗುತ್ತಿದೆ. ಆದರೂ ಪ್ರತಿನಿತ್ಯ 6,500 ರಿಂದ 7,500 ಜನರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಕೊರೊನಾ ಸೋಂಕು ದೃಢಪಟ್ಟವರ ಸಂಪರ್ಕದಲ್ಲಿರುವವರಲ್ಲಿ ರೋಗ ಲಕ್ಷಣಗಳಿದ್ದರೆ ಕಡ್ಡಾಯವಾಗಿ ಪರೀಕ್ಷೆ ನಡೆಸಲು ಸೂಚನೆ ನೀಡಿದ್ದೇನೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಮೇಲೆ ಟೆಲಿ ಐಸಿಯು ಮೂಲಕ ವಿಶೇಷ ನಿಗಾ ವಹಿಸಲಾಗುತ್ತಿದೆ. ಸೋಂಕಿನಿಂದ ವೈದ್ಯಕೀಯ ಸಿಬ್ಬಂದಿಯನ್ನು ಕಾಪಾಡಲು ಫ್ಲೂ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ.
ಕೊರೊನಾ ಕುರಿತು ಯಾರೂ ಆತಂಕ ಪಡುವ ಅಗತ್ಯವಿಲ್ಲ. ಆದರೆ ಪ್ರತಿಯೊಬ್ಬರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.