alex Certify BIG NEWS: ಗೋವು ರಾಷ್ಟ್ರೀಯ ಪ್ರಾಣಿ, ಅದರ ರಕ್ಷಣೆ ಎಲ್ಲರ ಹೊಣೆ ಎಂದು ಘೋಷಣೆ ಮಾಡಲು ಅಲಹಾಬಾದ್ ಹೈಕೋರ್ಟ್ ಮಹತ್ವದ ನಿರ್ದೇಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೋವು ರಾಷ್ಟ್ರೀಯ ಪ್ರಾಣಿ, ಅದರ ರಕ್ಷಣೆ ಎಲ್ಲರ ಹೊಣೆ ಎಂದು ಘೋಷಣೆ ಮಾಡಲು ಅಲಹಾಬಾದ್ ಹೈಕೋರ್ಟ್ ಮಹತ್ವದ ನಿರ್ದೇಶನ

ಹಸುವನ್ನು ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಬುಧವಾರ ಹೇಳಿದೆ.

ಗೋವಿನ ರಕ್ಷಣೆ ಎಲ್ಲರ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಹೇಳಿದೆ.

ದೇಶದ ಸಂಸ್ಕೃತಿ ಮತ್ತು ಅದರ ನಂಬಿಕೆಗೆ ಧಕ್ಕೆಯುಂಟಾದಾಗ ದೇಶವು ದುರ್ಬಲವಾಗುತ್ತದೆ ಎಂದು ನಮಗೆ ತಿಳಿದಿದೆ ಎಂದು ಹಸುವನ್ನು ಹತ್ಯೆ ಮಾಡಿದ ಆರೋಪ ಹೊತ್ತಿರುವ ಜಾವೇದ್ ಎಂಬಾತ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ವೇಳೆ ಅಭಿಪ್ರಾಯ ವ್ಯಕ್ತಪಡಿಸಿದ ಕೋರ್ಟ್, ಜಾಮೀನು ಅರ್ಜಿ ತಿರಸ್ಕರಿಸಿದೆ.

ವರದಿಯ ಪ್ರಕಾರ, ಮೂಲಭೂತ ಹಕ್ಕು ಕೇವಲ ಗೋಮಾಂಸ ಭಕ್ಷಕರ ಪರಮಾಧಿಕಾರವಲ್ಲ, ಬದಲಾಗಿ, ಹಸುವನ್ನು ಪೂಜಿಸುವವರು ಆರ್ಥಿಕವಾಗಿ ಹಸುಗಳ ಮೇಲೆ ಅವಲಂಬಿತರಾಗಿದ್ದಾರೆ, ಅರ್ಥಪೂರ್ಣವಾದ ಜೀವನವನ್ನು ನಡೆಸುವ ಹಕ್ಕನ್ನು ಹೊಂದಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಕೊಲ್ಲುವ ಹಕ್ಕಿಗಿಂತ ಮೇಲೆ ಬದುಕುವ ಹಕ್ಕು ಇದೆ. ಗೋಮಾಂಸ ತಿನ್ನುವ ಹಕ್ಕನ್ನು ಎಂದಿಗೂ ಮೂಲಭೂತ ಹಕ್ಕು ಎಂದು ಪರಿಗಣಿಸಲಾಗದು ಎಂದು ನ್ಯಾಯಾಲಯ ಹೇಳಿದೆ.

ಹಸು ವಯಸ್ಸಾದಾಗ, ಅದಕ್ಕೆ ಅನಾರೋಗ್ಯವಾದಾಗ ಕೂಡ ಉಪಯುಕ್ತವಾಗಿದೆ. ಸಗಣಿ ಮತ್ತು ಮೂತ್ರವು ಕೃಷಿಗೆ, ಔಷಧಗಳ ತಯಾರಿಕೆಗೆ ತುಂಬಾ ಉಪಯುಕ್ತವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ, ತಾಯಿಯಾಗಿ ಗೋವು ಪೂಜಿಸಲ್ಪಡುತ್ತದೆ.  ತಾಯಿಗೆ ವಯಸ್ಸಾಗುತ್ತದೆ, ಆಕೆ ಅನಾರೋಗ್ಯಕ್ಕೆ ಒಳಗಾಗುತ್ತಾಳೆ ಎಂದು ಅವಳನ್ನು ಕೊಲ್ಲುವ ಹಕ್ಕನ್ನು ಯಾರಿಗಾದರೂ ನೀಡಬಹುದೇ ಎಂದು ನ್ಯಾಯಾಲಯವು ವರದಿಯಲ್ಲಿ ಉಲ್ಲೇಖಿಸಿದೆ.

ಹಸುಗಳ ಮಹತ್ವವನ್ನು ಕೇವಲ ಹಿಂದೂಗಳು ಅರ್ಥಮಾಡಿಕೊಂಡಿಲ್ಲ, ಮುಸ್ಲಿಮರು ತಮ್ಮ ಆಳ್ವಿಕೆಯಲ್ಲಿ ಭಾರತದ ಸಂಸ್ಕೃತಿಯ ಒಂದು ಪ್ರಮುಖ ಭಾಗವೆಂದು ಪರಿಗಣಿಸಿದ್ದಾರೆ. 5 ಮುಸ್ಲಿಂ ಆಡಳಿತಗಾರರು ಗೋಹತ್ಯೆಯನ್ನು ನಿಷೇಧಿಸಿದ್ದರು. ಬಾಬರ್, ಹುಮಾಯೂನ್ ಮತ್ತು ಅಕ್ಬರ್ ಕೂಡ ನಿಷೇಧಿಸಿದ್ದಾರೆ ಅವರ ಧಾರ್ಮಿಕ ಹಬ್ಬಗಳಲ್ಲಿ ಹಸುಗಳನ್ನು ಬಲಿಕೊಡುವುದು. ಮೈಸೂರಿನ ನವಾಬ ಹೈದರ್ ಅಲಿ ಗೋಹತ್ಯೆಯನ್ನು ಶಿಕ್ಷಾರ್ಹ ಅಪರಾಧವಾಗಿಸಿದ್ದರು ಎಂದು ಕೋರ್ಟ್ ಹೇಳಿದೆ.

ಅಲಹಾಬಾದ್ ಹೈಕೋರ್ಟ್‌ನಿಂದ ಈ ಬಗ್ಗೆ ಚರ್ಚೆ ನಡೆಸಿ ಮೇಲ್ವಿಚಾರಣೆ ಮಾಡಲಾಗಿದೆ

ದೇಶದ ವಿವಿಧ ನ್ಯಾಯಾಲಯಗಳು ಮತ್ತು ಸುಪ್ರೀಂ ಕೋರ್ಟ್ ಕಾಲಕಾಲಕ್ಕೆ ಗೋವಿನ ಪ್ರಾಮುಖ್ಯತೆಯನ್ನು ಪರಿಗಣಿಸಿ, ಅದರ ರಕ್ಷಣೆ, ದೇಶದ ಜನರ ನಂಬಿಕೆ, ಸಂಸತ್ತು ಮತ್ತು ಶಾಸಕಾಂಗ ಸಭೆಯನ್ನು ಗಮನದಲ್ಲಿಟ್ಟುಕೊಂಡು ಅನೇಕ ನಿರ್ಧಾರಗಳನ್ನು ನೀಡಿವೆ. ಹಸುಗಳ ಹಿತಾಸಕ್ತಿಗಳನ್ನು ರಕ್ಷಿಸಲು ಸಮಯದೊಂದಿಗೆ ಹೊಸ ನಿಯಮಗಳನ್ನು ಸಹ ಮಾಡಲಾಗಿದೆ.

ಕೆಲವೊಮ್ಮೆ ಗೋವಿನ ರಕ್ಷಣೆ ಮತ್ತು ಸಮೃದ್ಧಿಯ ಬಗ್ಗೆ ಮಾತನಾಡುವವರು ಗೋವು ತಿನ್ನುವವರಾಗುವುದನ್ನು ನೋಡುವುದು ತುಂಬಾ ನೋವಿನ ಸಂಗತಿ. ಸರ್ಕಾರವು ಗೋಶಾಲೆಗಳನ್ನು ಸಹ ನಿರ್ಮಿಸಿದೆ, ಆದರೆ, ಹಸುಗಳನ್ನು ನೋಡಿಕೊಳ್ಳಲು ಜವಾಬ್ದಾರಿ ವಹಿಸಿಕೊಂಡಿರುವ ಜನರು ಕಾಳಜಿ ವಹಿಸುವುದಿಲ್ಲ ಎಂದು ಹೇಳಲಾಗಿದೆ.

ಗೋಶಾಲೆಗಳಲ್ಲಿ ಹಸುಗಳು ಹಸಿವಿನಿಂದ ಮತ್ತು ರೋಗದಿಂದ ಸಾಯುತ್ತವೆ. ಕೊಳಕಿನ ನಡುವೆ ಇರುತ್ತವೆ. ಆಹಾರವಿಲ್ಲದೇ ಅನೇಕ ಸಲ ಹಸುಗಳು ಪಾಲಿಥಿನ್ ತಿನ್ನುತ್ತವೆ. ಇದರ ಪರಿಣಾಮವಾಗಿ ಅನಾರೋಗ್ಯಕ್ಕೆ ತುತ್ತಾಗಿ ಸಾಯುತ್ತವೆ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದೆ.

ಹಾಲು ನೀಡುವುದನ್ನು ನಿಲ್ಲಿಸಿದ ಹಸುಗಳ ಸ್ಥಿತಿಯನ್ನು ರಸ್ತೆಗಳು ಮತ್ತು ಬೀದಿಗಳಲ್ಲಿ ಕಾಣಬಹುದು. ಅನಾರೋಗ್ಯ, ಹಾಲು ಕೊಡದ ಹಸುಗಳನ್ನು ಕಡೆಗಣಿಸಲಾಗುತ್ತದೆ. ಯಾರು ಗೋವಿನ ಸಂರಕ್ಷಣೆಯ ಬಗ್ಗೆ ಪ್ರಚಾರ ಮಾಡುತ್ತಾರೆಯೋ ಅಂತಹ ಜನ ಏನು ಮಾಡುತ್ತಿದ್ದಾರೆ. ಎಲ್ಲರೂ ಗೋವು ರಕ್ಷಣೆಗೆ ಮುಂದಾಗಬೇಕೆಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...