ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳುವವರಿಗಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿದೆ.
ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದರಿಂದ ಜನದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ NWKRTC ವಿವಿಧ ನಗರಗಳಿಗೆ ಬಸ್ ವ್ಯವಸ್ಥೆ ಮಾಡಿದೆ. ನಾಳೆಯಿಂದ ಅಂದರೆ ಅಕ್ಟೋಬರ್.29ರಿಂದ ನವೆಂಬರ್ 1ರವರೆಗೆ ಹಾಗೂ ನವೆಂಬರ್ 3 ಹಾಗೂ ನವೆಂಬರ್ 4ರಂದು ಹೆಚ್ಚುವರಿ ವಿಶೇಷ ಬಸ್ ಗಳು ಸಂಚರಿಸಲಿವೆ.
ಬೆಂಗಳೂರು, ಪುಣೆ, ಮಂಗಳೂರು, ಗೋವಾ, ಹೈದರಾಬಾದ್ ನಗರಗಳಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಸೇರಿದಂತೆ ಇತರ ಸ್ಥಳಗಳಿಗೆ ವಿಶೇಷ ಬಸ್ ಗಳು ಸಂಚರಿಸಲಿವೆ.
ಈ ವಿಶೇಷ ಬಸ್ ವ್ಯವಸ್ಥೆಯನ್ನು ಪ್ರಯಾಣಿಕರು ಸದುಪಯೋಗಪಡಿಸಿಕೊಳ್ಳುವಂತೆ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಮನವಿ ಮಾಡಿದೆ.