ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋಗಿ ಹಲವರು ಕಣ್ಣುಗಳಿಗೆ ಹಾನಿ ಮಾಡಿಕೊಂದಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ 91 ಪ್ರಕರಣಗಳು ದಾಖಲಾಗಿವೆ.
ಕಳೆದ ಮೂರು ದಿನಗಳಲ್ಲಿ ಪಟಾಕಿ ಸಿಡಿತದಿಂದ ಅವಘಡಗಳು ಹೆಚ್ಚಾಗಿದ್ದು, ಹಲವರು ಕಣ್ಣಿಗೆ ಹಾನಿ ಮಾಡಿಕೊಂಡಿದ್ದಾರೆ. ಬೆಂಗಳೂರಿನ ವಿವಿಧ ಕಣ್ಣಿನ ಆಸ್ಪತ್ರೆಗೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಈವರೆಗೆ 91 ಜನರು ಪಟಾಕಿ ಸಿಡಿತದಿಂದ ಗಾಯಗೊಂಡಿದ್ದು, ಆಸ್ಪತ್ರೆಗೆಗಳಿಗೆ ದಾಖಲಾಗಿದ್ದಾರೆ. ನಾರಾಯಣ ನೇತ್ರಾಲಯ, ಮಿಂಟೊ ಆಸ್ಪತ್ರೆ, ಶಂಕರ ಆಸ್ಪತ್ರೆಗಳಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಿಂಟೋ ಆಸ್ಪತ್ರೆಯಲ್ಲಿ 38 ಜನರು ಚಿಕಿತ್ಸೆ ಪಡೆದಿದ್ದಾರೆ. ಶನಿವಾರ 9 ಜನರು ದಾಖಲಾಗಿದ್ದಾರೆ. ನಾರಾಯಣ ನೇತ್ರಾಲಯದಲ್ಲಿ 53 ಪ್ರಕರಣಗಳು ದಾಖಲಾಗಿವೆ. ಹಲವರಿಗೆ ಕಣ್ಣಿಗೆ ಗಂಭೀರವಾದ ಹಾನಿಯಾಗಿದೆ ಎಂದು ತಿಳಿದುಬಂದಿದೆ.