alex Certify BIG NEWS: ದೀಪಾವಳಿ ಹಬ್ಬ: ನೈರುತ್ಯ ರೈಲ್ವೆಯಿಂದ ಈ ನಗರಗಳಿಗೆ 2 ವಿಶೇಷ ಎಕ್ಸ್ ಪ್ರೆಸ್ ರೈಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೀಪಾವಳಿ ಹಬ್ಬ: ನೈರುತ್ಯ ರೈಲ್ವೆಯಿಂದ ಈ ನಗರಗಳಿಗೆ 2 ವಿಶೇಷ ಎಕ್ಸ್ ಪ್ರೆಸ್ ರೈಲು

ಬೆಂಗಳೂರು: ದೀಪಾವಳಿ ಹಬ್ಬ ಇನ್ನೇನು ಬಂದೇ ಬಿಟ್ಟಿದೆ. ಬೆಳಕಿನ ಹಬ್ಬಕ್ಕಾಗಿ ಸಿದ್ಧತೆಗಳು ಆರಂಭವಾಗಿವೆ. ಈ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ಎರಡು ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸುತ್ತಿದೆ.

ದೀಪಾವಳಿ ಹಬ್ಬಕ್ಕೆಂದು ಬೆಂಗಳೂರಿನಿಂದ ಊರುಗಳಿಗೆ ತೆರಳುವ ಪ್ರಯಾಣಿಕರಿಗಾಗಿ ಬೆಂಗಳೂರು-ವಿಜಯಪುರ ಹಾಗೂ ಬೆಂಗಳೂರು-ಬೆಳಗವೈ ನಡುವೆ 2 ವಿಶೇಷ ರೈಲುಗಳು ಸಂಚರಿಸಲಿವೆ.

ರೈಲು ಸಂಖ್ಯೆ: 06231 ಎಸ್.ಎಂ.ವಿ.ಟಿ ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್ ಪ್ರೆಸ್ ರೈಲು ನವೆಂಬರ್ 10ರಂದು ಸಂಜೆ ಬೆಂಗಳೂರಿನ ಸರ್.ಎಂ.ವಿಶ್ವೇಷ್ವರಯ್ಯ ಟರ್ಮಿನಲ್ ನಿಂದ ಹೊರಟು ಮರುದಿನ ಬೆಳಿಗ್ಗೆ 10:55ಕ್ಕೆ ವಿಜಯಪುರ ತಲುಪಲಿದೆ.

ರೈಲು ಸಂಖ್ಯೆ: 06232 ವಿಜಯಪುರ – ಎಸ್.ಎಂ.ವಿ.ಟಿ ಬೆಂಗಳೂರು ರೈಲು ನವೆಂಬರ್ 14ರಂದು ಸಂಜೆ 5 ಗಂಟೆಗೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 9:30ಕ್ಕೆ ಎಸ್.ಎಂ.ವಿ.ಟಿ ಬೆಂಗಳೂರಿಗೆ ಆಗಮಿಸಲಿದೆ.

ರೈಲು ಸಂಖ್ಯೆ: 06585 ಎಸ್.ಎಂ.ವಿ.ಟಿ ಬೆಂಗಳೂರು- ಬೆಳಗಾವಿ ವಿಶೇಷ ಎಕ್ಸ್ ಪ್ರೆಸ್ ರೈಲು ನವೆಂಬರ್ 10 ರಂದು ರಾತ್ರಿ 8 ಗಂಟೆಗೆ ಎಸ್.ಎಂ.ವಿ.ಟಿಯಿಂದ ಹೊರಟು ಮರುದಿನ ಬೆಳಿಗ್ಗೆ 8 ಗಂಟೆಗೆ ಬೆಳಗಾವಿ ತಲುಪಲಿದೆ.

ರೈಲು ಸಂಖ್ಯೆ: 06586 ಬೆಳಗಾವಿ- ಎಸ್.ಎಂ.ಟಿ.ವಿ ವಿಶೇಷ ರೈಲು ನವೆಂಬರ್ 14ರಂದು ಸಂಜೆ 6:50ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 6 ಗಂಟೆಗೆ ಎಸ್. ಎಂ.ಟಿ.ವಿ ಬೆಂಗಳೂರಿಗೆ ಆಗಮಿಸಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...