alex Certify ಪಿ. ವಿ. ಸಿಂಧು ಜತೆ ಬ್ಯಾಡ್ಮಿಂಟನ್ ಕೋರ್ಟ್ ನಲ್ಲಿ ಬೆವರು ಹರಿಸಿದ ನಟಿ ದೀಪಿಕಾ ಪಡುಕೋಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿ. ವಿ. ಸಿಂಧು ಜತೆ ಬ್ಯಾಡ್ಮಿಂಟನ್ ಕೋರ್ಟ್ ನಲ್ಲಿ ಬೆವರು ಹರಿಸಿದ ನಟಿ ದೀಪಿಕಾ ಪಡುಕೋಣೆ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಚಲನಚಿತ್ರದಲ್ಲಿ ಅಭಿನಯಿಸುವುದಕ್ಕಿಂತ ಮೊದಲು ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿದ್ದರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ದೀಪಿಕಾ ತನಗೆ ಸಮಯ ಸಿಕ್ಕಾಗಲೆಲ್ಲಾ ಬ್ಯಾಡ್ಮಿಂಟನ್ ಕೋರ್ಟ್ ನಲ್ಲಿ ಕಾಲ ಕಳೆಯಲು ಇಷ್ಟಪಡುತ್ತಾರೆ.

ನಟಿ ದೀಪಿಕಾ ಪಡುಕೋಣೆ ಬ್ಯಾಡ್ಮಿಂಟನ್ ಅಂಗಳದಲ್ಲಿ ಬೆವರು ಹರಿಸಿದ್ದಾರೆ. ಹೌದು, ಬ್ಯಾಡ್ಮಿಂಟನ್ ಒಲಿಂಪಿಕ್ ಪದಕ ವಿಜೇತೆ ಪಿ. ವಿ. ಸಿಂಧು ಜೊತೆ ಆಟವಾಡಿ ತಮ್ಮ ಫಿಟ್ನೆಸ್ ಕಾಪಾಡಿದ್ದಾರೆ. ಇವರಿಬ್ಬರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಟಿ, “ಎಂದಿನಂತೆ ದಿನಚರಿ ಶುರು.. ಪಿ. ವಿ. ಸಿಂಧು ಜೊತೆ ಕ್ಯಾಲರಿಗಳನ್ನು ಬರ್ನ್ ಮಾಡುವುದು” ಎಂದು ಶೀರ್ಷಿಕೆ ನೀಡಿದ್ದಾರೆ.

ಅಪಾರ್ಟ್ ಮೆಂಟ್ ಭೀಕರ ಬೆಂಕಿ ದುರಂತ: ಜನರ ಕಣ್ಣೆದುರಲ್ಲೇ ಸುಟ್ಟು ಕರಕಲಾದ ಮಹಿಳೆ –ಇಬ್ಬರ ಸಾವು

ಫೋಟೋದಲ್ಲಿ ಪಿ. ವಿ. ಸಿಂಧು ಅವರು ನಗುವುದನ್ನು ಕಾಣಬಹುದು. ದೀಪಿಕಾ ಅವರ ಇನ್‌ಸ್ಟಾಗ್ರಾಮ್ ಪೋಸ್ಟ್ ಗಳನ್ನು ನೋಡಿದರೆ ಅವರು ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಅವರೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಾರಂಭಿಸಿದ್ದಾರೆ ಎಂದು ಹೇಳಬಹುದು.

ದೀಪಿಕಾ ಪಡುಕೋಣೆಗೆ ಬ್ಯಾಡ್ಮಿಂಟನ್‌ ಅಂದ್ರೆ ಬಹಳ ಅಚ್ಚುಮೆಚ್ಚು. ಅವರು ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಆಡಿದ್ದರು. ದೀಪಿಕಾ ತಂದೆ ಪ್ರಕಾಶ್ ಪಡುಕೋಣೆ ಹೆಸರಾಂತ ಬ್ಯಾಡ್ಮಿಂಟನ್ ಆಟಗಾರರಾಗಿದ್ದು, ಅವರು 1980ರಲ್ಲಿ ಲಂಡನ್‌ನ ವೆಂಬ್ಲೆ ಅರೆನಾದಲ್ಲಿ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಜಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...