ಬೆಳಗಾವಿ: ಇಂದು ನಡೆದ ಘಟನೆಯಿಂದ ನನಗೆ ಬಹಳ ನೋವಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾವುಕರಾಗಿದ್ದಾರೆ.
ವಿಧಾನಸಭೆಯಿಂದ ಹೊರಬಂದ ಅವರು, ಘಟನೆಯಿಂದ ನನ್ನ ಮನಸ್ಸಿಗೆ ಬಹಳ ನೋವಾಗಿದೆ. ಇಂದು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಾಳೆ ಇದರ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಿರೇಬಾಗೇವಾಡಿ ಠಾಣೆ ಪೊಲೀಸರಿಗೆ ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿ.ಟಿ. ರವಿ ಅವರನ್ನು ಬಂಧಿಸಿದ್ದಾರೆ.
ಘಟನೆ ಬಗ್ಗೆ ಕಾಂಗ್ರೆಸ್, ಬಿಜೆಪಿ ನಾಯಕರಿಂದ ಆರೋಪ, ಪ್ರತ್ಯಾರೋಪಗಳು ಕೇಳಿ ಬಂದಿದ್ದು, ಈ ನಡುವೆ ವಿಧಾನಸಭೆಯಿಂದ ಹೊರ ಬಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಘಟನೆಯಿಂದ ಮನಸ್ಸಿಗೆ ನೋವಾಗಿದೆ. ನಾಳೆ ಇದರ ಬಗ್ಗೆ ಮಾತನಾಡುತ್ತೇನೆ ಎಂದು ಭಾವುಕರಾಗಿ ಹೇಳಿದ್ದಾರೆ.