ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸರ್ನೇಮ್ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾನೂನು ಸಮರ ನಡೆಸುತ್ತಿದೆ. ಮೋದಿ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆ ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಒಳಗಾಗಿ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಗುಜರಾತ್ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದ್ದು, ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ಜುಲೈ 21 ರಂದು ಸುಪ್ರೀಂಕೋರ್ಟ್ ನಲ್ಲಿ ರಾಹುಲ್ ಗಾಂಧಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಲಿದ್ದು, ಅಂದು ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಲಿದೆ.
2019 ರಲ್ಲಿ ಮೋದಿ ಸರ್ನೇಮ್ ಕುರಿತಾದ ವಿವಾದಾತ್ಮಕ ಹೇಳಿಕೆ ವಿರುದ್ಧದ ಮಾನಹಾನಿ ಪ್ರಕರಣದಲ್ಲಿ ತಮಗೆ ವಿಧಿಸಿರುವ ಶಿಕ್ಷೆಯನ್ನು ತಡೆ ಹಿಡಿಯಬೇಕು ಎಂದು ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿತ್ತು, ಇದರಿಂದ ಲೋಕಸಭಾ ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅವರ ಅನರ್ಹತೆ ಮುಂದುವರಿಯಲಿದ್ದು, ಈ ವಿಚಾರವಾಗಿ ರಾಹುಲ್ ಗಾಂಧಿ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ .
ಗುಜರಾತ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಜೊತೆಯಲ್ಲೇ ಪೂರ್ಣೇಶ್ ಮೋದಿ ಕೂಡಾ ಸುಪ್ರೀಂ ಕೋರ್ಟ್ಗೆ ಕೇವಿಯಟ್ ಸಲ್ಲಿಕೆ ಮಾಡಿದ್ದಾರೆ. ರಾಹುಲ್ ಗಾಂಧಿ ಅವರ ವಿರುದ್ಧದ ಕ್ರಿಮಿನಲ್ ಮಾನನಷ್ಟ ಪ್ರಕರಣ ಸಂಬಂಧ ಗುಜರಾತ್ ಹೈಕೋರ್ಟ್ ಈಗಾಗಲೇ ಸೂರತ್ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ. ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಪರಿಗಣಿಸಿ 2 ವರ್ಷಗಳ ಕಾಲ ಶಿಕ್ಷೆ ನೀಡಿದೆ. ಇದೀಗ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಲಿದೆ. ಶಿಕ್ಷೆ ರದ್ದು ಕೋರಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಸುಪ್ರೀಂಕೋರ್ಟ್ ನಲ್ಲಿ ರಾಹುಲ್ ಗಾಂಧಿಗೆ ಮುನ್ನೆಡೆಯಾಗುತ್ತಾ ಕಾದು ನೋಡಬೇಕಾಗಿದೆ.