alex Certify ಪರಾಭವಗೊಂಡ ಬಿಜೆಪಿ ಅಭ್ಯರ್ಥಿಗಳಿಂದ ಲೋಕಸಭೆ ಟಿಕೆಟ್ ಗಾಗಿ ಕಸರತ್ತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಾಭವಗೊಂಡ ಬಿಜೆಪಿ ಅಭ್ಯರ್ಥಿಗಳಿಂದ ಲೋಕಸಭೆ ಟಿಕೆಟ್ ಗಾಗಿ ಕಸರತ್ತು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿರುವ ಬಿಜೆಪಿ ಅಭ್ಯರ್ಥಿಗಳು ಈಗ ಲೋಕಸಭಾ ಚುನಾವಣಾ ಟಿಕೆಟ್ ಮೇಲೆ ಕಣ್ಣೀಟ್ಟಿದ್ದು, ಟಿಕೆಟ್ ಗಿಟ್ಟಿಸಿಕೊಳ್ಳಲು ನಾನಾ ಕಸರತ್ತು ಆರಂಭಿಸಿದ್ದಾರೆ.

ಬಿಜೆಪಿಯ ಹತ್ತಕ್ಕು ಹೆಚ್ಚು ರಾಜ್ಯ ನಾಯಕರು ಲೋಕಸಭಾ ಟಿಕೆಟ್ ಗಾಗಿ ಲಾಭಿ ಆರಂಭಿಸಿದ್ದು, ತಮಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿ ಚುನವಣಾ ಪ್ರಚಾರವನ್ನು ಸಹ ತೆರೆ ಮರೆಯಲ್ಲಿ ಆರಂಭಿಸಿದ್ದಾರೆ ಎನ್ನಲಾಗಿದೆ. ಮಾಜಿ ಸಚಿವರು, ಶಾಸಕರು ಲೋಕಸಭಾ ಟಿಕೆಟ್ ಗಾಗಿ ಬಿಜೆಪಿ ವರಿಷ್ಠರ ಮೇಲೆ ಒತ್ತಡ ಹಾಕುತ್ತಿದ್ದು, ತಮಗೆ ಟಿಕೆಟ್ ನೀಡಿದರೆ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಮಾಜಿ ಸಚಿವ ವಿ.ಸೋಮಣ್ಣ, ಸಿ.ಟಿ.ರವಿ, ಬಿ.ಸಿ.ಪಟೀಲ್, ಡಾ.ಸುಧಾಕರ್, ಮುರುಗೇಶ್ ನಿರಾಣಿ, ಬಿ.ಶ್ರೀರಾಮುಲು, ಗೋವಿಂದ ಕಾರಜೋಳ, ಕರುಣಾಕರ ರೆಡ್ಡಿ, ಎಂ.ಪಿ.ರೇಣುಕಾಚಾರ್ಯ, ಪ್ರೀತಂ ಗೌಡ ಸೇರಿದಂತೆ ಹಲವು ನಾಯಕರು ಲೋಕಸಭಾ ಟಿಕೆಟ್ ಆಕಾಂಕ್ಷಿಗಳಾಗಿದ್ದು, ದೆಹಲಿ ಮಟ್ಟದಲ್ಲಿ ಲಾಭಿ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ಮಾಜಿ ಶಾಸಕ ಸಿ.ಟಿ.ರವಿ, ಉಡುಪಿ-ಚಿಕ್ಕಮಗಳೂರು ಇಲ್ಲವೇ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಆಸಕ್ತಿ ಹೊಂದಿದ್ದಾರೆ. ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ. ಈ ಕ್ಷೇತ್ರದ ಸಂಸದರಾಗಿರುವ ಬಿ.ಎನ್.ಬಚ್ಚೇಗೌಡ ಅವರಿಗೆ ವಯಸ್ಸಿನ ಕಾರಣಕ್ಕೆ ಈಬಾರಿ ಟಿಕೆಟ್ ದೊರೆಯುವುದು ಅನುಮಾನವಾಗಿದೆ. ವಿ.ಸೋಮಣ್ಣ ಬೆಂಗಳೂರು ದಕ್ಷಿಣ ಅಥವಾ ತುಮಕೂರು ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದಾರೆ. ಎಂ.ಪಿ.ರೇಣುಕಾಚಾರ್ಯ ದಾವಣಗೆರೆ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಇನ್ನು ಹಾಲಿ ಸಂಸದ ಶಿವಕುಮಾರ್ ಉದಾಸಿ ಅವರ ಕ್ಷೇತ್ರ ಹಾವೇರಿ ಮೇಲೆ ಬಿ.ಸಿ.ಪಾಟೀಲ್ ಕಣ್ಣಿಟ್ಟಿದ್ದಾರೆ. ಬಾಗಲಕೋಟೆಯಿಂದ ಮುರುಗೇಶ್ ನಿರಾಣಿ, ಬಳ್ಳಾರಿ ಕ್ಷೇತ್ರಕ್ಕಾಗಿ ಶ್ರೀರಾಮುಲು ಹಾಗೂ ಕರುಣಾಕರ ರೆಡ್ಡಿ ನಡುವೆ ಪೈಪೋಟಿ ನಡೆದಿದೆ. ಗೋವಿಂದ ಕಾರಜೋಳ ವಿಜಯಪುರ ಕ್ಷೇತ್ರಕ್ಕೆ, ವಿಶ್ವೇಶ್ವರ ಹೆಗಡೆ ಕಾಗೇರಿ ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ಗಾಗಿ ಲಾಭಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಕೆಲ ಲೋಕಸಭೆ ಸದಸ್ಯರು ಮತ್ತೆ ಸ್ಪರ್ಧೆಗೆ ನಿರಾಸಕ್ತಿ ತೋರಿರುವ ಕಾರಣಕ್ಕೆ ಹಾಗೂ ಕೆಲ ಸದಸ್ಯರಿಗೆ ವಯೋಮಾನದ ಕಾರಣಕ್ಕೆ ಈ ಬಾರಿ ಲೋಕಸಭಾ ಚುನಾವಣೆ ಕೈತಪ್ಪುವ ಸಾಧ್ಯತೆ ಇರುವುದರಿಂದ ವಿಧಾನಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಂದ ಲೋಕಸಭೆ ಟಿಕೆಟ್ ಗಾಗಿ ಕಸರತ್ತು ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...