ಉತ್ತರ ಪ್ರದೇಶ : ಮಥುರಾದ ಬೃಂದಾವನದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ದೇಶದ ಮೊದಲ ಬಾಲಕಿಯರ ಸೈನಿಕ ಶಾಲೆಯನ್ನು ಇಂದು ಉದ್ಘಾಟಿಸಿದ್ದಾರೆ.
ರಕ್ಷಣಾ ಸಚಿವಾಲಯದ ಪ್ರಕಟಣೆಯ ಪ್ರಕಾರ, ಸಂವಿದ್ ಗುರುಕುಲಂ ಬಾಲಕಿಯರ ಸೈನಿಕ್ ಶಾಲೆಯ ಉದ್ಘಾಟನೆಯು ಮಹತ್ವದ ಮೈಲಿಗಲ್ಲಾಗಿದೆ. ಇದು ಸುಮಾರು 870 ವಿದ್ಯಾರ್ಥಿಗಳನ್ನು ಹೊಂದಿರುವ ಬಾಲಕಿಯರ ಸೈನಿಕ ಶಾಲೆಯಾಗಿದೆ. ಇದನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದ್ದಾರೆ. ಇದು ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಮತ್ತು ರಾಷ್ಟ್ರವನ್ನು ರಕ್ಷಿಸಲು ಬಯಸುವ ಯುವತಿಯರಿಗೆ ಮಾರ್ಗದರ್ಶಿ ಬೆಳಕು ಎಂದು ಅವರು ಶ್ಲಾಘಿಸಿದರು.ಈ ಹೊಸ ಸಂಸ್ಥೆಗಳು ಹಿಂದಿನ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 33 ಸೈನಿಕ ಶಾಲೆಗಳಿಗೆ ಪೂರಕವಾಗಿವೆ ಎಂದು ಸಚಿವಾಲಯ ಹೇಳಿದೆ.
ವೃಂದಾವನದಲ್ಲಿ ಸಂವಿದ್ ಗುರುಕುಲಂ ಬಾಲಕಿಯರ ಸೈನಿಕ ಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯದ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.