alex Certify Shocking: ಇಷ್ಟದ ಆಹಾರ ತಯಾರಿಸಿಲ್ಲವೆಂದು ನೇಣಿಗೆ ಶರಣಾದ ಬಾಲಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking: ಇಷ್ಟದ ಆಹಾರ ತಯಾರಿಸಿಲ್ಲವೆಂದು ನೇಣಿಗೆ ಶರಣಾದ ಬಾಲಕಿ

ನಾನು ಬಯಸಿದ ಆಹಾರವನ್ನು ತಾಯಿ ತಯಾರಿಸಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ 16 ವರ್ಷದ ಬಾಲಕಿಯೊಬ್ಬಳು ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರಾಖಂಡದ ಡೆಹ್ರಾಡೂನ್ ಜಿಲ್ಲೆಯಲ್ಲಿ ನಡೆದಿದೆ.

ಡೆಹ್ರಾಡೂನ್ ನ ರಾಯಪುರದ ದಾದಾ ಲಕ್ಹ್ಕೊಂಡ್ ಪ್ರದೇಶದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಡಿನ್ನರ್ ಗೆ ತಾನು ಇಷ್ಟಪಟ್ಟ ಆಹಾರ ಮಾಡಿಲ್ಲವೆಂದು ಬಾಲಕಿ ತಾಯಿಯೊಂದಿಗೆ ಜಗಳವಾಡಿದ್ದಾಳೆ. ಅಲ್ಲದೆ ಆಹಾರವನ್ನು ಸೇವಿಸಲು ನಿರಾಕರಿಸಿದ್ದಾಳೆ.

ಬಳಿಕ ತನ್ನ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದು, ಮೊದಲಿಗೆ ಪೋಷಕರು ನಿರ್ಲಕ್ಷ್ಯ ವಹಿಸಿದ್ದಾರೆ. ಆದರೆ ಎಷ್ಟೊತ್ತಾದರೂ ಬಾಲಕಿ ಬಾಗಿಲು ತೆರೆಯದ ಕಾರಣ ಗಾಬರಿಗೊಂಡು ಬಾಗಿಲು ಹೊಡೆದು ನೋಡಿದ ವೇಳೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.

ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಬಾಲಕಿ ಮೃತಪಟ್ಟಿದ್ದಳು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...