alex Certify ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7ನೇ ವೇತನ ಆಯೋಗ ವರದಿ ಶೀಘ್ರ ಸಲ್ಲಿಕೆಗೆ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7ನೇ ವೇತನ ಆಯೋಗ ವರದಿ ಶೀಘ್ರ ಸಲ್ಲಿಕೆಗೆ ಮನವಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ, ಸೌಲಭ್ಯಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ವರದಿ ಶೀಘ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗದಿಂದ ಮನವಿ ಮಾಡಲಾಗಿದೆ.

ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದಲ್ಲಿ ಪದಾಧಿಕಾರಿಗಳ ನಿಯೋಗ 7ನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ನೌಕರರ ವೇತನ, ಭತ್ಯೆ, ಸೌಲಭ್ಯಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಶೀಘ್ರವೇ ಸರ್ಕಾರಕ್ಕೆ ವರದಿ ಸಲ್ಲಿಸಲು ಮನವಿ ಮಾಡಲಾಗಿದೆ.

ಹಿಂದಿನ ವೇತನ ಆಯೋಗದ ಅವಧಿ ಮಾರ್ಚ್ 31ಕ್ಕೆ ಮುಕ್ತಾಯವಾಗಲಿದ್ದು, ಚುನಾವಣೆ ಸಮೀಪಿಸುತ್ತಿರುವುದರಿಂದ ನೀತಿ ಸಂಹಿತೆ ಜಾರಿಯಾಗುವ ದಿನಗಳು ಸಮೀಪಿಸುತ್ತಿವೆ. ಹೀಗಾಗಿ ಸರ್ಕಾರಿ ನೌಕರರಿಗೆ ಸಕಾಲಿಕ ವೇತನ ಪರಿಷ್ಕರಣೆಗೆ ಅನುಕೂಲವಾಗುವಂತೆ ಶೀಘ್ರವೇ ವರದಿ ಸಲ್ಲಿಸಬೇಕು ಎಂದು ಕೋರಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...